ನಾನು ಕಾಶ್ಮೀರ್ ಪಂಡಿತ್, ನನ್ನ ಕುಟುಂಬ ಕಾಶ್ಮೀರ್ ಪಂಡಿತ್ | ರಾಹುಲ್ ಗಾಂಧಿ
ಜಮ್ಮು: ನಾನು ಕಾಶ್ಮೀರ್ ಪಂಡಿತ್(ಬ್ರಾಹ್ಮಣ), ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ನಾನು ಮನೆಯ ವಾತಾವರಣವನ್ನು ಅನುಭವಿಸುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದು, ನನ್ನ ಕುಟುಂಬವು ಜಮ್ಮು ಮತ್ತು ಕಾಶ್ಮೀರದೊಂದಿಗೆ ಸುದೀರ್ಘ ಸಂಬಂಧ ಹೊಂದಿದೆ ಎಂದು ಅವರು ಹೇಳಿದ್ದಾರೆ.
ಎರಡು ದಿನಗಳ ಜಮ್ಮು ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ನಾನು ಕಾಶ್ಮೀರಿ ಪಂಡಿತ್ ಮತ್ತು ನನ್ನ ಕುಟುಂಬ ಕಾಶ್ಮೀರಿ ಪಂಡಿತ್ ಎಂದು ಹೇಳಿದರು.
ನನ್ನ ಕಾಶ್ಮೀರ ಪಂಡಿತ್ ಸಹೋದರರಿಗೆ ನಾನು ಏನಾದರೂ ಮಾಡುವುದಾಘಿ ಭರವಸೆ ನೀಡುತ್ತೇನೆ. ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಆದರೆ ನನಗೆ ನೋವಾಗಿದೆ. ಯಾಕೆಂದರೆ, ಬಿಜೆಪಿ ಮತ್ತು ಆರೆಸ್ಸೆಸ್ ಸಹೋದರತ್ವ ಬಂಧವನ್ನು ಮುರಿಯಲು ಪ್ರಯತ್ನಿಸುತ್ತಿವೆ ಎಂದು ರಾಹುಲ್ ಗಾಂಧಿ ಹೇಳಿದರು.
ಬಿಜೆಪಿಯು ಕಾಶ್ಮೀರವನ್ನು ದುರ್ಬಲಗೊಳಿಸಿದೆ. ನಿಮ್ಮ ರಾಜ್ಯವನ್ನು ನಿಮ್ಮ ಕೈಯಿಂದ ಕಿತ್ತುಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಮರಳಿ ಪಡೆಯಬೇಕು ಎಂದರು. ಜೊತೆಗೆ ತಮ್ಮ ಭಾಷಣದ ಕೊನೆಯಲ್ಲಿ ಜೈ ಮಾತಾ ದಿ ಎಂಬ ಘೋಷಣೆಯನ್ನು ಕೂಗಿ, ಜನರಿಗೂ ಘೋಷಣೆ ಕೂಗುವಂತೆ ಮನವಿ ಮಾಡಿದರು.
ಇನ್ನಷ್ಟು ಸುದ್ದಿಗಳು…
ಬಾಗಿಲು ಮುಚ್ಚಿದ ಕಾರು ತಯಾರಿಕಾ ‘ಫೋರ್ಡ್’ ಸಂಸ್ಥೆ | ಎಷ್ಟು ಉದ್ಯೋಗಿಗಳು ನಿರುದ್ಯೋಗಿಗಳಾಗಲಿದ್ದಾರೆ ಗೊತ್ತಾ?
ಆ್ಯಂಕರ್ ಅನುಶ್ರೀ ವಿರುದ್ಧ ದಾಖಲೆ ರಹಿತ ಆರೋಪ | ಪ್ರಶಾಂತ್ ಸಂಬರ್ಗಿಯ ಬೆವರಳಿಸಿದ ಚಕ್ರವರ್ತಿ ಚಂದ್ರಚೂಡ್
ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಲಾರಿ: 6 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ
ಪೆಟ್ರೋಲ್ ತುಂಬುತ್ತಿದ್ದ ವೇಳೆ ಕಾರಿಗೆ ಬೆಂಕಿ: ಬಾಲಕಿ ಸಹಿತ 9 ಮಹಿಳೆಯರು ಸುಟ್ಟು ಕರಕಲು
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು, ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ: ವ್ಯಾಪಕ ಆಕ್ರೋಶ
ಪೊಲೀಸರ ಎದುರೇ ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸಿ ಶಾಕ್ ನೀಡಿದ ಯುವತಿ!
ಸಾಬಿಯಾ ಸೈಫಿ ಅತ್ಯಾಚಾರ, ಬರ್ಬರ ಹತ್ಯೆ ವಿರುದ್ಧ ಎಸ್ ಡಿಪಿಐ ಬೃಹತ್ ಹಕ್ಕೊತ್ತಾಯ