ಅನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಸೇರಿಸಂತೆ ಐವರ ಬಂಧನ

ಬೆಂಗಳೂರು: ಹಿಂದೂ ಯುವಕ ಹಾಗೂ ಮುಸ್ಲಿಮ್ ಯುವತಿಯ ಮೇಲೆ ಅನೈತಿಕ ಗೂಂಡಾಗಿರಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಯುವಕ ಸೇರಿದಂತೆ ಐವರನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮಹೀಮ್, ಅಫ್ರೀದಿ, ವಾಸೀಮ್, ಅಂಜುಮ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
3 ದಿನಗಳ ಹಿಂದೆ ಬುರ್ಖಾ ಧರಿಸಿದ್ದ ಯುವತಿಯೊಬ್ಬಳು ತನ್ನ ಸ್ನೇಹಿತನ ಜೊತೆಗೆ ಬೈಕ್ ನಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದ ವೇಳೆ ಏಕಾಏಕಿ ಯುವಕರ ಗುಂಪೊಂದು, ಅನ್ಯಕೋಮಿನ ಯುವಕನ ಜೊತೆಗೆ ಮಾತನಾಡುತ್ತಿದ್ದೀಯಾ? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಗೂಂಡಾಗಿರಿ ನಡೆಸಿದ್ದರು. ಯುವತಿಯು ನಾನು ನನ್ನ ಕ್ಲಾಸ್ ಮೇಟ್ ಜೊತೆಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದರೂ ಕೇಳದೇ ಯುವಕನ ಮೇಲೆ ಹಲ್ಲೆ ನಡೆಸಿ, ವಿಡಿಯೋ ವೈರಲ್ ಮಾಡಿದ್ದರು.
ಸದ್ಯ ಆರೋಪಿಗಳನ್ನು ಬಂಧಿಸಿದ ಚಂದ್ರಾಲೇಔಟ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಕಾನೂನು ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD