ಪ್ರಧಾನಿಯಾದರೂ ಕಾನೂನಿಗೆ ಎಲ್ಲರೂ ಒಂದೇ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜೈಲು ಶಿಕ್ಷೆ ಫಿಕ್ಸ್ - Mahanayaka
3:07 AM Friday 20 - September 2024

ಪ್ರಧಾನಿಯಾದರೂ ಕಾನೂನಿಗೆ ಎಲ್ಲರೂ ಒಂದೇ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜೈಲು ಶಿಕ್ಷೆ ಫಿಕ್ಸ್

imran khan
05/08/2023

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಪಿಟಿಐ – ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿದರೆ ಹೆಚ್ಚುವರಿ ಆರು ತಿಂಗಳು ಜೈಲಿನಲ್ಲಿ ಇರಬೇಕಾಗುತ್ತದೆ ಎಂದು ಸಹ ಎಚ್ಚರಿಕೆ ನೀಡಲಾಗಿದೆ.

ಇಸ್ಲಾಮಾಬಾದ್ ಪೊಲೀಸರು ಇಮ್ರಾನ್ ಖಾನ್ ಅವರನ್ನು ಬಂಧಿಸಲು ಬಂಧನ ವಾರಂಟ್ ಹೊರಡಿಸಿದ್ದಾರೆ. ಈ ತೀರ್ಪಿನಿಂದಾಗಿ ಐದು ವರ್ಷಗಳ ಅವಧಿಗೆ ರಾಜಕೀಯದಿಂದ ಅನರ್ಹಗೊಳಿಸಲಾಗುತ್ತದೆ. ಖಾನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಧೀಶರು ಅವರನ್ನು ಬಂಧಿಸಲು ಆದೇಶಿಸಿದ್ದಾರೆ. ಆದರೆ, ತಕ್ಷಣವೇ ಮೇಲ್ಮನವಿ ಸಲ್ಲಿಸುವುದಾಗಿ ಅವರ ಕಾನೂನು ತಂಡ ಹೇಳಿದೆ.


Provided by

ಇಮ್ರಾನ್ ಖಾನ್ ದೇಶಾದ್ಯಂತ 140 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಭಯೋತ್ಪಾದನೆ, ಹಿಂಸಾಚಾರ, ಧರ್ಮನಿಂದನೆ, ಭ್ರಷ್ಟಾಚಾರ ಮತ್ತು ಕೊಲೆಯಂತಹ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಅಕ್ಟೋಬರ್ 21, 2022 ರಂದು ಪಾಕಿಸ್ತಾನದ ಚುನಾವಣಾ ಆಯೋಗವು ಇಮ್ರಾನ್ ಖಾನ್ ಅವರನ್ನು ಸುಳ್ಳು ಹೇಳಿಕೆಗಳು ಮತ್ತು ತಪ್ಪು ಘೋಷಣೆಗಾಗಿ ಅನರ್ಹಗೊಳಿಸಿದ ನಂತರ ತೋಶಾಖಾನಾ ವಿಷಯವು ರಾಷ್ಟ್ರೀಯ ರಾಜಕೀಯದಲ್ಲಿ ಮುನ್ನಲೆಗೆ ಬಂತು.

ತೋಷಖಾನಾವು ಕ್ಯಾಬಿನೆಟ್ ವಿಭಾಗದ ಅಡಿಯಲ್ಲಿ ಒಂದು ಇಲಾಖೆಯಾಗಿದ್ದು, ಇದು ಆಡಳಿತಗಾರರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಇತರ ಸರ್ಕಾರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರು ನೀಡಿದ ಉಡುಗೊರೆಗಳನ್ನು ಸಂಗ್ರಹಿಸುತ್ತದೆ. ಖಾನ್ ಅವರು ಬೆಲೆಬಾಳುವ ವಾಚ್ ಸೇರಿದಂತೆ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಅವುಗಳನ್ನು ಲಾಭಕ್ಕಾಗಿ ಮಾರಾಟ ಮಾಡಿದ್ದರು ಎಂಬುದು ಆರೋಪವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ