ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಉಚಿತ ಶಿಕ್ಷಣ: ಮಹತ್ವದ ಭರವಸೆ ನೀಡಿದ ರಾಹುಲ್ ಗಾಂಧಿ

29/10/2023

ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಶು ವಿಹಾರದಿಂದ ಸ್ನಾತಕೋತ್ತರ ಪದವಿ ವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಛತ್ತೀಸ್​ಗಢದ ಭಾನುಪ್ರತಾಪ್​ಪುರ ಕ್ಷೇತ್ರದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಲವು ಭರವಸೆಗಳನ್ನು ನೀಡಿದರು.
ರಾಜೀವ್ ಗಾಂಧಿ ಪ್ರೋತ್ಸಾಹನ್ ಯೋಜನೆಯಡಿ ತೆಂಡು ಪಟ್ಟಾ (ಬೀಡಿ ಎಲೆಗಳು) ಬೆಲೆಯನ್ನು 4,000 ರೂ.ಗೆ ಹಾಗೂ ಇತರ ಸಣ್ಣ ಅರಣ್ಯ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು 10 ರೂ.ಗೆ ಹೆಚ್ಚಿಸುವುದಾಗಿ ತಿಳಿಸಿದರು.

ಪ್ರಧಾನಿ ಮೋದಿ ಯಾವಾಗಲೂ ತಮ್ಮ ಭಾಷಣಗಳಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಾರೆ. ಹಾಗಾದರೆ ಅವರು ಜಾತಿ ಜನಗಣತಿ ನಡೆಸಲು ಯಾಕೆ ಹಿಂಜರಿಯುತ್ತಾರೆ ಎಂದು ಪ್ರಶ್ನಿಸಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿ ಜನಗಣತಿ ನಡೆಸಲಾಗುತ್ತದೆ. ರೈತರು, ದಲಿತರು, ಕಾರ್ಮಿಕರು ಮತ್ತು ಆದಿವಾಸಿಗಳ ಕಲ್ಯಾಣಕ್ಕೆ ಕಾಂಗ್ರೆಸ್ ಆದ್ಯತೆ ನೀಡುವುದಾಗಿ ಅವರು ಇದೇ ವೇಳೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

Exit mobile version