ರಾಜಸ್ಥಾನದಲ್ಲಿ ಇಂದಿನಿಂದ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ..!
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಕರ್ನಾಟಕದ ಜನತೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದು ಅದರ ಜಾರಿಗಾಗಿ ಜನತೆ ಕಾತರದಿಂದ ಕಾಯುತ್ತಿದ್ದಾರೆ. ಇತ್ತ ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ರಾಜ್ಯದಲ್ಲಿ ಇಂದಿನಿಂದ ಉಚಿತ ವಿದ್ಯುತ್. ಹೌದು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದು, ಇಂದಿನಿಂದ ಜಾರಿಗೆ ಬರುವಂತೆ ರಾಜಸ್ಥಾನದಲ್ಲಿರುವ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಅಂದರೆ ಇನ್ಮುಂದೆ ರಾಜಸ್ಥಾನದಲ್ಲಿ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಬಿಲ್ ಸಂಪೂರ್ಣ ಶೂನ್ಯವಾಗಲಿದೆ. 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುವ ಕುಟುಂಬ ಮಂದಿ 100 ಯುನಿಟ್‌ಗಳ ರಿಯಾಯಿತಿಯನ್ನು ಸಹ ಪಡೆಯುತ್ತಾರೆ. ಅಂದರೆ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೂ ಸಂಪೂರ್ಣ ಬಿಲ್ನಲ್ಲಿ 100 ಯೂನಿಟ್ ಕಡಿತವಾಗುತ್ತದೆ.
ಅದಕ್ಕಿಂತ ಹೆಚ್ಚಿನ ಬಳಕೆಯ ಮೇಲೆ, ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕಗಳು ಸೇರಿದಂತೆ ಎಲ್ಲಾ ಇತರ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆಯಂತೆ. ಇದು ಅಲ್ಲಿನ ಜನರಿಗೆ ಖುಷಿ ನೀಡಿದ್ದು, ಅತ್ತ ಈ ನೂತನ ಯೋಜನೆ ಜಾರಿಯಾಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಕೆಂಡಕಾರಿದೆ. ಈ ವರ್ಷಾಂತ್ಯಕ್ಕೆ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw