ಯಕ್ಷಗಾನದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ನಿಂದನೆ: ದೂರು ದಾಖಲು
ಉಡುಪಿ: ಯಕ್ಷಗಾನದ ನೆಪದಲ್ಲಿ ದಲಿತರ ಬಗ್ಗೆ ಕೀಳುಮಟ್ಟದ ಭಾಷೆ ಪ್ರಯೋಗಿಸಿ ಮಾತನಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ದಲಿತಪರ ಸಂಘಟನೆಯೊಂದು ದೂರು ದಾಖಲಿಸಿದೆ.
ಅಂಬೇಡ್ಕರ್ ಸೇನೆ ಉಡುಪಿ ಘಟಕದ ಜಿಲ್ಲಾಧ್ಯಕ್ಷ ಶಶಿ ಕುಮಾರ್ ಅವರು ಇಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಶ್ರೀ ಕಟೀಲು ಯಕ್ಷಗಾನ ಮೇಳದಲ್ಲಿ ಸಾರ್ವಜನಿಕವಾಗಿ ದಲಿತ ಸಮಾಜದ ಬಗ್ಗೆ ಅತ್ಯಂತ ಕೀಳುಮಟ್ಟದಲ್ಲಿ ಯಕ್ಷಗಾನ ಪಾತ್ರಧಾರಿ ಮಹೇಶ್ ಸಾಣೂರು ಎಂಬವರು ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇವರ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು ಮಾಡಿ ಸೂಕ್ತ ಕಾನೂನು ಕ್ರಮಕೈಗೊಂಡು ನೊಂದ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಕಾರ್ಕಳ ಉಪಾಧೀಕ್ಷಕ, ಕಾರ್ಕಳ ವಿಭಾಗಕ್ಕೆ ದೂರು ನೀಡಲಾಗಿದೆ. ಜೊತೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಗೂ ದೂರಿನ ಪ್ರತಿಯನ್ನು ಕಳುಹಿಸಲಾಗಿದೆ.
ದಲಿತ ಸಮುದಾಯವನ್ನು ನಿಂದಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಗಳು ಕೂಡ ಕೇಳಿ ಬಂದಿವೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ವಿವಿಧ ದಲಿತ ಸಂಘಟನೆಗಳು ವಿವಿಧೆಡೆಗಳಲ್ಲಿ ದೂರು ನೀಡಲು ಮುಂದಾಗಿದ್ದು, ವ್ಯಾಪಕ ಪ್ರತಿಭಟನೆ ವ್ಯಕ್ತವಾಗುವ ಸಾಧ್ಯತೆಗಳು ಕಂಡು ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw