ಸಚಿವ ಸ್ಥಾನವನ್ನೇ ಬಿಡ್ತೀನಿ: ಬಿಜೆಪಿ ನಾಯಕರಿಗೆ ಬೆದರಿಕೆ ಹಾಕಿದ ಮಾಂಝಿ

ತಮ್ಮ ಸಚಿವ ಸ್ಥಾನ ಬಿಟ್ಟುಕೊಡುವುದಾಗಿ ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಝಿ ಬಿಜೆಪಿ ನಾಯಕರಿಗೆ ಬೆದರಿಕೆ ಹಾಕಿದ್ದು, ಬಿಹಾರದಲ್ಲಿ ರಾಜಕೀಯ ವಲಯದಲ್ಲಿ ಚರ್ಚೆ ಹೆಚ್ಚಿಸಿದೆ. ತಮ್ಮ ಪಕ್ಷದೊಂದಿಗೆ ನ್ಯಾಯಯುತ ಒಪ್ಪಂದ ನಡೆಯದ ಕಾರಣ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ತಾನು ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದಾರೆ.
ಮಂಗಳವಾರ ಮುಂಗೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾಂಝಿ ಈ ಹೇಳಿಕೆ ನೀಡಿದ್ದಾರೆ. ಎನ್‌ಡಿಎಯಿಂದ ಎಚ್‌ಎಎಂ ನಿರ್ಲಕ್ಷ್ಯಕ್ಕೊಳಗಾಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಮತ್ತು ಜಾರ್ಖಂಡ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ತಮ್ಮ ಪಕ್ಷಕ್ಕೆ ಒಂದೇ ಒಂದು ಸ್ಥಾನ ನೀಡದ ಎನ್‌ಡಿಎ ಮೈತ್ರಿಯ ನಡೆಯನ್ನು ಅವರು ಉಲ್ಲೇಖಿಸಿದ್ದಾರೆ.
ಬಿಹಾರದಲ್ಲಿ ತಮ್ಮ ಮೌಲ್ಯವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ಹೇಳಿದ್ದು. “ನಾನು ಸಂಪುಟಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್-ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಮಾಂಝಿ ಯವರ ಹೇಳಿಕೆಯಿಂದ ಗರಿಷ್ಠ ರಾಜಕೀಯ ಲಾಭ ಪಡೆಯಲು ವಿಪಕ್ಷಗಳ ಮಹಾಮೈತ್ರಿಕೂಟವು ಎಲ್ಲಾ ರೀತಿಯಲ್ಲೂ ಪ್ರಯತ್ನಿಸುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj