ಪಾಕ್ ವಿರುದ್ಧ ಘರ್ಜಿಸಿದ ವಿರಾಟ್: ಭಾರತಕ್ಕೆ ಪಾಕಿಸ್ತಾನ ವಿರುದ್ಧ ಭರ್ಜರಿ ಜಯ - Mahanayaka
10:24 PM Sunday 23 - February 2025

ಪಾಕ್ ವಿರುದ್ಧ ಘರ್ಜಿಸಿದ ವಿರಾಟ್: ಭಾರತಕ್ಕೆ ಪಾಕಿಸ್ತಾನ ವಿರುದ್ಧ ಭರ್ಜರಿ ಜಯ

23/02/2025

ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಐದನೇ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಸೋಲಿಸಿದೆ.

ಇದರೊಂದಿಗೆ ಈ ಟೂರ್ನಿಯಲ್ಲಿ ಭಾರತದ ಅಜೇಯ ಓಟ ಮುಂದುವರೆದರೆ, ಪಾಕಿಸ್ತಾನದ ಸೋಲಿನ ಸರಣಿ ಮುಂದುವರೆದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ 42.3 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.

ತಮ್ಮ ಏಕದಿನ ವೃತ್ತಿಜೀವನದ 51 ನೇ ಶತಕವನ್ನು ದಾಖಲಿಸಿದ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗುಳಿದರು.43ನೇ ಓವರ್​ನ ಮೂರನೇ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಶತಕವನ್ನು ಪೂರೈಸಿದರು. ಇದರ ಜೊತೆಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ