ಇಂಧನ ಬೆಲೆ ಇಳಿಕೆ ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ - Mahanayaka
11:45 AM Sunday 15 - December 2024

ಇಂಧನ ಬೆಲೆ ಇಳಿಕೆ ಬಿಜೆಪಿಯ ಚುನಾವಣಾ ಕಾರ್ಯತಂತ್ರವಾಗಿತ್ತು: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

mallikarjuna kharge
30/03/2022

ನವದೆಹಲಿ: ಚುನಾವಣಾ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಚುನಾವಣೆ ಮುಗಿದ ತಕ್ಷಣ ಏರಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರದ ಭಾಗವಾಗಿ ಬಿಜೆಪಿ ಇಂಧನ ಬೆಲೆಯನ್ನು ಇಳಿಕೆ ಮಾಡಿತ್ತು. ಈಗ ಅವರು ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನೆಪದಲ್ಲಿ ತೈಲ ಬೆಲೆಯನ್ನು ಹೆಚ್ಚಿಸುವ ಮೂಲಕ ಸರಿದೂಗಿಸುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದರು.

ಕೇಂದ್ರ ಸರ್ಕಾರವು ತೈಲ ಬೆಲೆ ಏರಿಕೆ ಮಾಡಿರುವುದರ ವಿರುದ್ಧ ಮಾ. 31ರಂದು ದೆಹಲಿಯ ವಿಜಯ್‌ ಚೌಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದವರು ಇದೇ ವೇಳೆ ತಿಳಿಸಿದರು.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 80 ಪೈಸೆಯಷ್ಟು ಹೆಚ್ಚಿಸಿವೆ. ಇದರಿಂದಾಗಿ, ಕಳೆದ ಒಂಬತ್ತು ದಿನಗಳಲ್ಲಿ ಎಂಟು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ ₹5.60ರಷ್ಟು ಹೆಚ್ಚಿಸಿದಂತಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಗೆ ದುಷ್ಕರ್ಮಿಗಳ ದಾಳಿ: ಸಿಸಿಟಿವಿ, ಭದ್ರತಾ ಗೋಡೆ ಧ್ವಂಸ

ಬಿಎಸ್‌ವೈ ರಾಜ್ಯ ರಾಜಕೀಯದಲ್ಲಿ ಶ್ರೀಕೃಷ್ಣ ಪಾತ್ರ ವಹಿಸಲಿದ್ದಾರೆ: ಶಾಸಕ ಎನ್.ಮಹೇಶ್

ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆ

ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್​ ಭಟ್: ಸಿಎಫ್ಐ ಪ್ರತಿಭಟನೆ

ಇತ್ತೀಚಿನ ಸುದ್ದಿ