ಎಸೆಸೆಲ್ಸಿ ಪಾಸ್ ಆದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ 2,582 ಹುದ್ದೆಗಳು ಖಾಲಿ | ಈಗಲೇ ಅರ್ಜಿ ಸಲ್ಲಿಸಿ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 2,582 ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.
ವಿದ್ಯಾರ್ಹತೆ: ಎಸೆಸೆಲ್ಸಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. -ಓಬಿಸಿ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ವೇತನ: ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200- ರಿಂದ 22,000-ರೂ ವೇತನವನ್ನು ನೀಡಲಾಗುವುದು. ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100-ರೂ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 100-ರೂ, ಪ.ಜಾ, ಪ.ಪಂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ http://appost.in/gdsonline/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗಿದೆ. ಡಿಸೆಂಬರ್ 11, 2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.