ಎರಡನೇ ಎಸೆತಕ್ಕೆ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ನಡೆಯುತ್ತಿದ್ದು, ನ್ಯೂಝಿಲೆಂಡ್ ತಂಡ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿ 252 ರನ್ ಟಾರ್ಗೆಟ್ ನೀಡಿದೆ.
ರೋಹಿತ್ ಮತ್ತು ಶುಭಮನ್ ಗಿಲ್ ಅದ್ಬುತ ಜೊತೆಯಾಟ ನೀಡಿದರು. ಆದರೆ ಇಬ್ಬರೂ 17 ಓವರ್‌ಗಳಲ್ಲಿ 100 ರನ್‌ಗಳನ್ನು ಕಲೆಹಾಕಿದರು ಆದರೆ 31ರನ್ ಗಳಿಸಿದ ಗಿಲ್ ಗ್ಲೆನ್ ಫಿಲಿಪ್ಸ್ ಗೆ ಕ್ಯಾಚ್ ನೀಡುವ ಮೂಲಕ ತಮ್ಮ ವಿಕೆಟ್ ಒಪ್ಪಿಸಿದರು.
ಗಿಲ್ ವಿಕೆಟ್ ಒಪ್ಪಿಸಿದ ಬೆನ್ನಲ್ಲೇ ಬ್ಯಾಟಿಂಗ್ ಮಾಡಲು ಆಗಮಿಸಿದ ವಿರಾಟ್ ಕೊಹ್ಲಿ ಎರಡನೇ ಎಸೆತದಲ್ಲೇ ಔಟಾದರು. ಮೈಕೆಲ್ ಬ್ರೇಸ್‌ವೆಲ್ ಅವರ ಚೆಂಡಿನಲ್ಲಿ ಎಲ್ ಬಿಡಬ್ಲ್ಯೂ ಆದ ವಿರಾಟ್ ಕೊಹ್ಲಿ ತಮ್ಮ ವಿಕೆಟ್ ಒಪ್ಪಿಸಿದರು.
ಭಾರತ ಇದೀಗ ಎರಡು ವಿಕೆಟ್ ಗಳ ನಷ್ಟಕ್ಕೆ 115 ರನ್ ಗಳಿಸಿದೆ. ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಐಯರ್ ಅವರು ಜೊತೆಯಾಟವಾಡುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: