ವಿಶ್ವಬ್ಯಾಂಕ್ ಗೆ ‘ಭಾರತೀಯ ಸಾರಥಿ’: ನೂತನ ಅಧ್ಯಕ್ಷರಾಗಿ ಅಜಯ್ ಬಂಗಾ
ಭಾರತೀಯ-ಅಮೆರಿಕನ್ ವ್ಯಕ್ತಿ ಅಜಯ್ ಬಂಗಾ ಅವರು ಶುಕ್ರವಾರ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ವಿಶ್ವ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರು 63 ವರ್ಷದ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ವಿಶ್ವ ಬ್ಯಾಂಕ್‌ನ 14 ನೇ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.
ಬಂಗಾ ಅವರು ವಿಶ್ವ ಬ್ಯಾಂಕ್‌ನ ಮುಖ್ಯಸ್ಥರಾಗಿರುವ ಮೊದಲ ಭಾರತೀಯ-ಅಮೆರಿಕನ್ ಆಗಿದ್ದಾರೆ. ಅವರು ಫೆಬ್ರವರಿಯಲ್ಲಿ ಕೆಳಗಿಳಿಯುವ ನಿರ್ಧಾರವನ್ನು ಘೋಷಿಸಿದ್ದ ಡೇವಿಡ್ ಮಾಲ್ಪಾಸ್ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಬಂಗಾ ಇತ್ತೀಚೆಗೆ ಜನರಲ್ ಅಟ್ಲಾಂಟಿಕ್‌ನಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ, ಅವರು ಸುಮಾರು 24,000 ಉದ್ಯೋಗಿಗಳನ್ನು ಹೊಂದಿರುವ ಜಾಗತಿಕ ಸಂಸ್ಥೆಯಾದ ಮಾಸ್ಟರ್‌ಕಾರ್ಡ್‌ನ ಅಧ್ಯಕ್ಷ ಮತ್ತು ಸಿಇಒ ಆಗಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ವಿಶ್ವ ಬ್ಯಾಂಕ್, ವಿಶ್ವ ಬ್ಯಾಂಕ್ ಗ್ರೂಪ್‌ನ ಹೊಸ ಅಧ್ಯಕ್ಷರಾದ ಅಜಯ್ ಬಂಗಾ ಅವರನ್ನು ನಾವು ಸ್ವಾಗತಿಸುತ್ತಿದ್ದೇವೆ ಎಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw