ಭಾರತೀಯ ಸೇನೆಗೆ ಸೇರಲು ಬಯಸುತ್ತೀರಾ? ಇಲ್ಲಿದೆ ಸುವರ್ಣಾವಕಾಶ - Mahanayaka
5:57 PM Thursday 12 - December 2024

ಭಾರತೀಯ ಸೇನೆಗೆ ಸೇರಲು ಬಯಸುತ್ತೀರಾ? ಇಲ್ಲಿದೆ ಸುವರ್ಣಾವಕಾಶ

indian army
21/06/2024

ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ಬಯಸುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 2024-25 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

(ಬಾಲಕರಿಗೆ ಮಾತ್ರ). ಆಸಕ್ತ ಅಭ್ಯರ್ಥಿಗಳು ಜುಲೈ, 10 ರೊಳಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1 ಲಕ್ಷ. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು(10 ಜುಲೈ 2004 ರಿಂದ ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು). ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು.

ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಜುಲೈ, 10 ರೊಳಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನಿಂದ ಪಡೆಯಬಹುದು.

ಅರ್ಜಿ ಸಲ್ಲಿಸಲು ಜುಲೈ, 10 ಕೊನೆಯ ದಿನವಾಗಿದೆ(ಬೆಳಗ್ಗೆ 10 ರಿಂದ ಸಂಜೆ 5:30 ರವರೆಗೆ, ಸಾರ್ವಜನಿಕರ ರಜಾ ದಿನಗಳನ್ನು ಹೊರತುಪಡಿಸಿ). ಸಹಾಯವಾಣಿ ದಕ್ಷಿಣ ಕನ್ನಡ ಜಿಲ್ಲೆ ದೂ.ಸಂ.0824-2225078, ಉಡುಪಿ ಜಿಲ್ಲೆ ದೂ.ಸಂ.0820-2574881, ಉತ್ತರ ಕನ್ನಡ ದೂ.ಸಂ.08382-226589 ಹಾಗೂ ಕೇಂದ್ರ ಕಚೇರಿ ದೂ.ಸಂ. 8050770004 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ