ಭಾರತೀಯ ಸೇನೆ, ಪೊಲೀಸರ ಜಂಟಿ ಕಾರ್ಯಾಚರಣೆ: ಇಬ್ಬರು ಉಗ್ರರ ಬಂಧನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.
ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಹೇಳಲಾಗಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ.
ಬಾರಾಮುಲ್ಲಾ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw