ಅಪಾಯಕ್ಕೆ ಸಿಲುಕಿದ್ದ 12 ಭಾರತೀಯ ಸಿಬ್ಬಂದಿಯನ್ನು ರಕ್ಷಿಸಿದ ಭಾರತೀಯ ಕರಾವಳಿ ಪಡೆ - Mahanayaka
12:41 PM Sunday 22 - December 2024

ಅಪಾಯಕ್ಕೆ ಸಿಲುಕಿದ್ದ 12 ಭಾರತೀಯ ಸಿಬ್ಬಂದಿಯನ್ನು ರಕ್ಷಿಸಿದ ಭಾರತೀಯ ಕರಾವಳಿ ಪಡೆ

05/12/2024

ಅರಬ್ಬೀ ಸಮುದ್ರದಲ್ಲಿ ವಾಣಿಜ್ಯ ಹಡಗು ಮುಳುಗಿ ಅಪಾಯಕ್ಕೆ ಸಿಲುಕಿದ್ದ 12 ಭಾರತೀಯ ಸಿಬ್ಬಂದಿಯನ್ನು ಭಾರತೀಯ ಕರಾವಳಿ ಪಡೆ ರಕ್ಷಣೆ ಮಾಡಿದೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಸಾಗರ ಭದ್ರತಾ ಪಡೆಯ ವಿಮಾನ ಹಾಗೂ ಎಂವಿ ಕಾಸ್ಕೋ ಗ್ಲೋರಿ ಹಡಗು ನೆರವಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುಜರಾತಿನ ಪೋರ್‌ಬಂದರ್‌ನಿಂದ ಇರಾನ್ ನ ಅಬ್ಬಾಸ್ ಬಂದರಿನತ್ತ ವಾಣಿಜ್ಯ ಹಡಗು ಸಾಗುತ್ತಿರುವಾಗ ಈ ಅವಘಡ ಸಂಭವಿಸಿದೆ.

ಉತ್ತರ ಅರಬ್ಬಿ ಸಮುದ್ರದಲ್ಲಿ ಭಾರತದ ಸಾಗರ ವ್ಯಾಪ್ತಿಯ ಹೊರಗೆ ಪಾಕಿಸ್ತಾನದ ಸಾಗರ ವಲಯದಲ್ಲಿ ‘ಎಂಎಸ್‌ವಿ ಅಲ್ ಪಿರನ್‌ಪಿರ್’ ಎಂಬ ಹಡಗು ಮುಳುಗಡೆಯಾಗಿತ್ತು. ನಂತರ ಪಾಕಿಸ್ತಾನದ ಸಾಗರ ಭದ್ರತಾ ಪಡೆ ಸಹಯೋಗದಲ್ಲಿ ಭಾರತೀಯ ಕರಾವಳಿ ಪಡೆ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿ 12 ಭಾರತೀಯರನ್ನು ರಕ್ಷಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕರಾವಳಿ ಪಡೆ, ಡಿಸೆಂಬರ್ ೪ರಂದು ಹಡಗು ಮುಳುಗಡೆಗೊಂಡಿತು. ಭಾರತೀಯ ಕರಾವಳಿ ಪಡೆಯ ‘ಸಾರ್ತಕ್’ ಹಡಗಿನ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಮಾನವೀಯ ನೆಲೆಯಲ್ಲಿ ಹುಡುಕಾಟ ಮತ್ತು ಕಾರ್ಯಾಚರಣೆಯ ಉದ್ದಕ್ಕೂ ಎರಡೂ ದೇಶಗಳ ಸಾಗರ ರಕ್ಷಣೆ ಸಮನ್ವಯ ಕೇಂದ್ರ ನಿಕಟ ಸಮನ್ವಯವನ್ನು ಸಾಧಿಸಿತು ಎಂದು ತಿಳಿಸಿದೆ.

ಡಿಸೆಂಬರ್ 2ರಂದು ವಾಣಿಜ್ಯ ಹಡಗು ಸರಕುಗಳೊಂದಿಗೆ ಪೋರ್‌ಬಂದರ್‌ನಿಂದ ಇರಾನ್‌ನತ್ತ ಹೊರಟಿತ್ತು. ಸಾಗರದ ಪ್ರಕ್ಷುಬ್ಧತೆ ಮತ್ತು ಪ್ರವಾಹಕ್ಕೆ ಸಿಲುಕಿ ಹಡಗು ಬುಧವಾರ ಬೆಳಿಗ್ಗೆ ಮುಳುಗಡೆಗೊಂಡಿತು. ಎಲ್ಲ ಸಿಬ್ಬಂದಿ ಆರೋಗ್ಯವಾಗಿದ್ದಾರೆ ಎಂದು ಐಸಿಜಿ ಪ್ರಕಟಣೆ ಹೇಳಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ