Indian Navy Jobs: ಭಾರತೀಯ ನೌಕಾಪಡೆಯಲ್ಲಿ ಭರ್ಜರಿ 741 ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು - Mahanayaka

Indian Navy Jobs: ಭಾರತೀಯ ನೌಕಾಪಡೆಯಲ್ಲಿ ಭರ್ಜರಿ 741 ಹುದ್ದೆಗಳ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು

indian navy jobs
18/07/2024

ಭಾರತೀಯ ರಕ್ಷಣಾ ಪಡೆಗಳಲ್ಲಿ ಉದ್ಯೋಗ ಮಾಡಬಯಸುವವರಿಗೆ, ಭಾರತೀಯ ನೌಕಾಪಡೆಯಲ್ಲಿ ಒಟ್ಟು 741 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ, 10ನೇ ತರಗತಿ, ಪದವಿ ಹಾಗೂ ಐಟಿಐ ಮುಗಿಸಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಪ್ರತಿಯೊಬ್ಬ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Indian Navy recruitment 2024 : ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ ವಿವಿಧ 741 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಾರತೀಯ ನೌಕಾ ಪಡೆಯುವ ನಿಗದಿಸಿರುವ ಅರ್ಹತೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಸೇರಿದಂತೆ ಇತರೆ ಪ್ರಮುಖ ಉಪಯುಕ್ತ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.


Provided by

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳು : Vacancy Details

ಭಾರತೀಯ ನೌಕಾಪಡೆಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳು, ಪೈರ್ ಮ್ಯಾನ್ ಹುದ್ದೆಗಳು, ಫೈಯರ್ ಇಂಜಿನ್ ಡ್ರೈವರ್ ಹುದ್ದೆಗಳು ಸೇರಿದಂತೆ ವಿವಿಧ ಒಟ್ಟು 741 ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ.

ಅರ್ಜಿ ಸಲ್ಲಿಸುವವರು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು :

ಶೈಕ್ಷಣಿಕ ವಿದ್ಯಾರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ, 10ನೇ ತರಗತಿ, ಪದವಿ ಹಾಗೂ ಐಟಿಐ ಮುಗಿಸಿರಬೇಕು.

ಅದೇ ರೀತಿ ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವವರ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 27 ವರ್ಷದ ಒಳಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುವುದು?

ಭಾರತೀಯ ನೌಕಾಪಡೆಯು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 100 ಅಂಕಗಳ ನೂರು ಪ್ರಶ್ನೆಗಳ ಆನ್ಲೈನ್ ಪರೀಕ್ಷೆಯನ್ನು ನಡೆಸಿ ಗಳಿಸಿದ ಅಂಕಗಳ ಆಧಾರದ ಮೇಲೆ ಮುಂದಿನ ಹಂತದಲ್ಲಿ ವಿವಿಧ ಪರೀಕ್ಷೆಗಳನ್ನು ನಡೆಸುವ ಮುಖಾಂತರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ನಿಗದಿತ ಪ್ರಮುಖ ದಿನಾಂಕಗಳು :

* ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ – 20ನೇ ಜುಲೈ 2024
* ಅರ್ಜಿ ಸಲ್ಲಿಸಲು ಕೊನೇ ದಿನಾಂಕ – 02ನೇ ಆಗಸ್ಟ್ 2024

ಅರ್ಜಿ ಸಲ್ಲಿಸುವವರು ಈ ಲಿಂಕ್ ಮೇಲೆ ಒತ್ತಿ – www.joinindiannavy.gov.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ