ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

ನವದೆಹಲಿ: ಕೆನಡಾದಲ್ಲಿ ಗುಂಡಿನ ದಾಳಿಗೆ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಭಾರತೀಯ ವಿದ್ಯಾರ್ಥಿನಿಗೆ ಗುಂಡೇಟು ತಗುಲಿದ್ದು, ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ.
ಹರ್ ಸಿಮ್ರತ್ ರಾಂಧಾವಾ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್ ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಇವರು ಅಧ್ಯಯನ ನಡೆಸುತ್ತಿದ್ದರು.
ಹರ್ಸಿಮ್ರತ್ ರಾಂಧಾವಾ ಬಸ್ಸು ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೇಳೆ ಅವರಿಗೆ ಗುಂಡೇಟು ತಗುಲಿತ್ತು. ತಮಗೆ ಸಂಬಂಧಿಸದ ಘಟನೆಯಲ್ಲಿ ಅವರು ಅನ್ಯಾಯವಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ವಿದ್ಯಾರ್ಥಿನಿ ಸಾವಿನ ಮತ್ತು ಗುಂಡಿನ ದಾಳಿಯ ಸಂಬಂಧ ಕೆನಡಾ ಸರ್ಕಾರ ಇದೀಗ ತನಿಖೆ ಕೈಗೆತ್ತಿಕೊಂಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: