ಭಾರತದ ವೈದ್ಯಕೀಯ ವಿದ್ಯಾರ್ಥಿ ಚೀನಾದಲ್ಲಿ ಸಾವು: ಮೃತದೇಹ ಭಾರತಕ್ಕೆ ತರಲು ಪೋಷಕರ ಮನವಿ
ಚೆನ್ನೈ: ಭಾರತದಿಂದ ವೈದ್ಯಕೀಯ ವ್ಯಾಸಂಗಕ್ಕೆ ಚೀನಾಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ಅನಾರೋಗ್ಯದಿಂದ ಮೃತಪಟ್ಟ ಘಟನೆ ನಡೆದಿದ್ದು, ಇದೀಗ ವಿದ್ಯಾರ್ಥಿಯ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.
ಅಬ್ದುಲ್ ಶೇಖ್(22) ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ಇವರು ತಮಿಳನಾಡು ಮೂಲದವರಾಗಿದ್ದಾರೆ. ಕಳೆದ 5 ವರ್ಷಗಳಿಂದ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು.
ಇತ್ತೀಚೆಗೆ ಅವರು ಭಾರತಕ್ಕೆ ಮರಳಿದ್ದರು ಆದರೆ, ಇಂಟರ್ನ್ ಶಿಪ್ ಗಾಗಿ ಮತ್ತೆ ಚೀನಾಕ್ಕೆ ತೆರಳಿದ್ದರು ಎನ್ನಲಾಗಿದೆ. ಚೀನಾದಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw