ಇಂದಿರಾ ಕ್ಯಾಂಟೀನ್ ಗೆ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ, ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ | ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವುದು ಬಿಜೆಪಿ ಪ್ರಣಾಳಿಕೆ. ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡಿದರೆ, ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಇಂದಿರಾಗಾಂಧಿ ಭಾವಚಿತ್ರ ಇರುವ ಕಾರಣ ಅದನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ನಾಮಕರಣ ಮಾಡುವ ಬಗ್ಗೆ ಮಾತನಾಡಿದ್ದೇನೆ. ಅನ್ನಪೂರ್ಣೇಶ್ವರಿ ಪಾರ್ವತಿಯ ಅಂಶ, ಹೆಸರು ಬದಲಾದರೂ ಬಡವರಿಗೆ ಅನ್ನ ನೀಡುವ ಉದ್ದೇಶ ಮುಂದುವರಿಯಲಿದೆ. ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಒಂದೇ ಕುಟುಂಬ ಸದಸ್ಯರು ನೂರಾರು ಯೋಜನೆಗಳಗೆ ತಮ್ಮದೇ ಹೆಸರು ಇಟ್ಟುಕೊಂಡಿದ್ದಾರೆ. ಜವಹರಲಾಲ್ ನೆಹರೂ, ಇಂದಿರಾಗಾಂಧಿ ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲು 1989- 90ರವರೆಗೆ ಕಾಯಬೇಕಾಯಿತು. ನಮ್ಮ ಬೆಂಬಲದೊಂದಿಗೆ ರಚನೆಯಾಗಿದ್ದ ವಿ.ಪಿ.ಸಿಂಗ್ ಸರ್ಕಾರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಸ್ತಾವದ ಮೇರೆಗೆ ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಲಾಯಿತು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಇನ್ನಷ್ಟು ಸುದ್ದಿಗಳು…
ಟಾಲಿವುಡ್ ನಲ್ಲಿಯೂ ಡ್ರಗ್ಸ್ ವಾಸನೆ: ರಾಣಾ ದಗ್ಗುಬಾಟಿ ಸೇರಿದಂತೆ 12 ನಟ-ನಟಿಯರಿಗೆ ಇಡಿ ಸಮನ್ಸ್
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ
ಭಾರತವು ಕಂಪೆನಿಗಳ ಗುಲಾಮಗಿರಿಯತ್ತ ಸಾಗುತ್ತಿದೆ | ಈಸ್ಟ್ ಇಂಡಿಯಾ ಕಂಪೆನಿಯನ್ನು ನೆನಪಿಸಿದ ರಾಹುಲ್ ಗಾಂಧಿ
ದಂತ ವೈದ್ಯನ ಕೈಯಿಂದ ಜಾರಿದ ಸ್ಕ್ರೂ ವೃದ್ಧನ ಶ್ವಾಸಕೋಶ ಸೇರಿತು | ಮುಂದೆ ನಡೆದದ್ದೇನು ಗೊತ್ತಾ?
ಈ ಬಾರಿ ಆನ್ ಲೈನ್ ನಲ್ಲೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ: ಸಚಿವ ಬಿ.ಶ್ರೀರಾಮುಲು




























