ಚಲಿಸುತ್ತಿದ್ದ ರೈಲಿಗೆ ಸಿಲುಕಿ ಸಾವಿಗೆ ಶರಣಾದ ಮನಪಾ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ!
ಮಣಿಪಾಲ: ವ್ಯಕ್ತಿಯೊಬ್ಬರು ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.
ಮೃತರನ್ನು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಹೆಬ್ರಿಯ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ.
ಮಣಿಪಾಲ ಪೋಲಿಸರು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಛಿದ್ರ ದೇಹ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಸನಿಹದಲ್ಲಿ ಕಾರೊಂದು ಪತ್ತೆಯಾಗಿದೆ. ಮೃತನಿಗೆ ಸಂಬಂಧ ಪಟ್ಟಿರುವ ಕಾರು ಇರಬಹುದೆಂದು ಶಂಕಿಸಲಾಗಿದೆ. ಕಾರಿನಲ್ಲಿರುವ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆ; ಮುಖ್ಯ ಲೆಕ್ಕಾಧಿಕಾರಿ ಎಂಬ ಉಲ್ಲೇಖ ಇದೆ. ಹಾಗೆಯೇ ಆಧಾರ್ ಕಾರ್ಡ್ ಪತ್ತೆಯಾಗಿದ್ದು ಇದರಿಂದ ವ್ಯಕ್ತಿಯನ್ಮುಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw