ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿದ ಯುವತಿ ಮೇಲೆ ಇಂಕ್ ದಾಳಿ - Mahanayaka

ಸಚಿವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿದ ಯುವತಿ ಮೇಲೆ ಇಂಕ್ ದಾಳಿ

Ink thrown
13/06/2022

ನವದೆಹಲಿ: ರಾಜಸ್ಥಾನ ಸಚಿವ ಮಹೇಶ್ ಜೋಶಿ ಅವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಯುವತಿಯ ಮೇಲೆ ದೆಹಲಿಯಲ್ಲಿ  ನೀಲಿ ಇಂಕ್  ಬಳಿದಿರುವ ಘಟನೆ ನಡೆದಿದೆ.

ಶನಿವಾರ ರಾತ್ರಿ 9.30ರ ಸುಮಾರಿಗೆ ಕಾಳಿಂದಿ ಕುಂಜ್ ರಸ್ತೆಯ ಬಳಿ ತನ್ನ ತಾಯಿಯೊಂದಿಗೆ ಈ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆಕೆಯ ಮೇಲೆ ಇಬ್ಬರು ಯುವಕರು ನೀಲಿ ಇಂಕ್ ಎಸೆದು ಹೋಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೆಯ) ಇಶಾ ಪಾಂಡೆ ಹೇಳಿದ್ದಾರೆ.

ನೊಂದ ಮಹಿಳೆಯ ಹೇಳಿಕೆಯನ್ನು ಆಧರಿಸಿ ಪೊಲೀಸರು, ಸುಳ್ಳು ಸಾಕ್ಷಿ ನೀಡುವಂತೆ ಬೆದರಿಕೆಯೊಡ್ಡಿರುವುದು ಹಾಗೂ ಕ್ರಿಮಿನಲ್ ಬೆದರಿಕೆ ಸೇರಿ ವಿವಿಧ ಕಾಯ್ದೆಗಳಡಿ ಶಾಹೀನ್ ಬಾಗ್ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್ ದಾಖಸಿಕೊಂಡಿದ್ದಾರೆ. ಇತ್ತ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಈ ಪ್ರಕರಣ ಸಂಬಂಧ ದಾಖಲಾದ ಎಫ್‌ ಐಆರ್ ಪ್ರತಿ, ಆರೋಪಿಗಳ ಬಂಧನ ಕುರಿತ ಮಾಹಿತಿ ಹಾಗೂ ಸಂತ್ರಸ್ತ ಯುವತಿ ಮತ್ತು ಕುಟುಂಬಕ್ಕೆ ಸುರಕ್ಷತೆ ಹಾಗೂ ರಕ್ಷಣೆ ಬಗ್ಗೆ ಪೊಲೀಸರು ತೆಗೆದುಕೊಂಡು ಕ್ರಮಗಳ ವಿವರಣೆ ಸಲ್ಲಿಸುವಂತೆ ಪೊಲೀಸರಿಗೆ ಮಹಿಳಾ ಆಯೋಗದ ಅಧ್ಯಕ್ಷರು ಸೂಚಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಸಂತ್ರಸ್ತೆಯು ರಾಜಸ್ಥಾನದ ಸಚಿವನ ಪುತ್ರನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದು, ಈ ಬಗ್ಗೆ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಯುವತಿಯನ್ನು ಬೆದರಿಸುವ ತಂತ್ರ ಎಂದು ಘಟನೆಯನ್ನು ವಿಶ್ಲೇಷಿಸಲಾಗುತ್ತಿದೆ. ಘಟನೆ ಸಂಬಂಧ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಂದೆಡೆ ಪ್ರತಿಭಟನೆ ಮತ್ತೊಂದೆಡೆ ರಾಹುಲ್ ಗಾಂಧಿ ವಿಚಾರಣೆ!

ಬಸ್, ಟೆಂಪೋ ಟ್ರಾವೆಲ್ ಮೇಲೆ ಉರುಳಿ ಬಿದ್ದ ಬೃಹತ್ ಮರ!

ಇಡಿ ಕಚೇರಿಗೆ ರಾಹುಲ್ ಗಾಂಧಿ ಅಧಿಕಾರಿಗಳಿಂದ ಹಾಜರು

ಜಿಮ್ ನಲ್ಲಿ ವರ್ಕೌಟ್ ವೇಳೆ ಕುಸಿದು ಬಿದ್ದು ಯುವಕ ಸಾವು!

ಲೈಂಗಿಕ ದೌರ್ಜನ್ಯ ವಿರೋಧಿಸಿದ ಮಹಿಳೆ ಪೇಪರ್ ಕಟರ್ ನಿಂದ ಹಲ್ಲೆ:  ಮಹಿಳೆ ಮುಖಕ್ಕೆ 118 ಹೊಲಿಗೆ!

ಇತ್ತೀಚಿನ ಸುದ್ದಿ