ಕರ್ತವ್ಯದಲ್ಲೇ ಗುಪ್ತಚರ ಇಲಾಖೆ ಸಿಬ್ಬಂದಿಗೆ ಹೃದಯಾಘಾತ

rajesh
17/09/2023

ಮಂಗಳೂರು: ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಇಂದು ನಡೆದಿದೆ.

ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಮೃತರು. ರಾಜ್ಯ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ.

1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಇನ್ನೂ ಏಳು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬೇಕಾಗಿತ್ತು. ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯೂ ಆಗಿದ್ದರು.

ಇತ್ತೀಚಿನ ಸುದ್ದಿ

Exit mobile version