ಮುಂದಿನ ಸಿಎಂ ಕಗ್ಗಂಟಿನ ನಡುವೆಯೇ ಹಿರಿಯ ಅಧಿಕಾರಿಗಳ ಜತೆ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅನೌಪಚಾರಿಕ ಮಾತುಕತೆ!
ಬೆಂಗಳೂರು: ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು.
ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆಯದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಾವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೊಗ ನೀತಿ, ಕೈಗಾರಿಕಾ ನೀತಿ ಎಲ್ಲ ಹೊಸ ಯೊಜನೆಗಳ ತರಲು ಅಧಿಕಾರಿಗಳ ಪಾತ್ರ ಮಹತ್ವದ್ದು, ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು ಎಂದರು.
ನಾವು ಐದು ವರ್ಷಕ್ಕೆ ಬರುವವರು, ನೀವು ಸುದೀರ್ಘ ಅಧಿಕಾರದಲ್ಲಿ ಇರುವವರು. ರಾಜ್ಯದ ಏಳಿಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಅಂತ ನಾನು ಗಟ್ಟಿ ಧನಿಯಲ್ಲಿ ಹೇಳಿರಬಹುದು. ಆದರೆ ಯಾವುದೇ ವೈಊಯಕ್ತಿಕ ಅಭಿಪ್ರಾಯ ಇರಲಿಲ್ಲ ಎಂದರು.
ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಜಿಎಸ್ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ. ಕರ್ನಾಟಕದ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw