ರೈತರ ಪ್ರತಿಭಟನೆಗೆ ಬೆದರಿ ಇಂಟರ್ ನೆಟ್ ಸ್ಥಗಿತ
26/01/2021
ದೆಹಲಿ: ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿದ್ದಂತೆಯೇ ದೆಹಲಿಯಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ. ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ರೈತರು ತಮ್ಮ ಧ್ವಜ ಹಾರಿಸುವ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಐತಿಹಾಸಿಕ ಘಟನೆಯೊಂದು ನಡೆದುಹೋಗಿದೆ.
ಈ ನಡುವೆ ದೆಹಲಿಗೆ ರೈತರು ಇನ್ನು ಕೂಡ ಟ್ರ್ಯಾಕ್ಟರ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ರಾಷ್ಟ್ರ ರಾಜಧಾನಿ ರೈತರ ಪ್ರತಿಭಟನೆಯಿಂದ ಕಂಗೆಟ್ಟಿದ್ದು, ಪೊಲೀಸರು ಹಾಗೂ ಭದ್ರತಾ ಪಡೆಗಳು ರೈತರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಸದ್ಯ ರೈತರ ಪ್ರತಿಭಟನೆ ತೀವ್ರಗೊಂಡಿರುವಂತ ಸಿಂಘು, ತಿಕ್ರಿ ಹಾಗೂ ಗಾಜಿಪುರ್ ಪ್ರದೇಶದಲ್ಲಿ ಕೇಂದ್ರ ಗೃಹ ಇಲಾಖೆಯ ಸೂಚನೆಯ ಮೇರೆಗೆ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.