ನಾಲಿಗೆ ತಂದ ಆಪತ್ತು: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್! - Mahanayaka
7:56 PM Saturday 21 - December 2024

ನಾಲಿಗೆ ತಂದ ಆಪತ್ತು: ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್!

munirathna
14/09/2024

ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ನಿರ್ದಿಷ್ಟ ಸಮುದಾಯದ ನಿಂದನೆ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ.

ಬಂಧನದ ಸುಳಿವು ಲಭ್ಯವಾಗುತ್ತಿದ್ದಂತೆಯೇ ಮುನಿರತ್ನ ಆಂಧ್ರದ ಚಿತ್ತೂರಿಗೆ ಹೊರಡಲು ಮುಂದಾಗಿದ್ದು, ಈ ವೇಳೆ ಮುಳಬಾಗಿಲು ತಾಲೂಕಿನ ಹೊರವಲಯದ ನಂಗಲಿ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುನಿರತ್ನ ಅವರು ಚೆಲುವರಾಜು ಎಂಬ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಚಲುವರಾಜು ಎನ್ನುವರಿಗೆ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪವಿದೆ.  ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ 2 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ