ಗೋಲ್ಡ್ ಸ್ಮಗ್ಲಿಂಗ್ ಕೇಸ್: ರನ್ಯಾ ರಾವ್ ತಂದೆ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

11/03/2025
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ರನ್ಯಾ ರಾವ್ ಅವರ ಮಲತಂದೆ ರಾಮಚಂದ್ರ ರಾವ್ ( ಐಪಿಎಸ್) ಅವರ ಪಾತ್ರದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.
ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ಒಂದು ವಾರದ ಒಳಗಾಗಿ ತನಿಖಾ ವರದಿ ಸಮೇತ ಸರ್ಕಾರಕ್ಕೆ ಮಾಹಿತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಆದೇಶ ಆದೇಶ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರಿಗೆ ತನಿಖೆಯ ಹೊಣೆಗಾರಿಕೆ ನೀಡಲಾಗಿದ್ದು, ಶಿಷ್ಟಾಚಾರ ಸೌಲಭ್ಯಗಳ ಬಳಕೆಯನ್ನು ಪಡೆದುಕೊಳ್ಳಲು ಕಾರಣವಾದ ಸಂಗತಿಗಳು ಹಾಗೂ ಸಂದರ್ಭಗಳು ಮತ್ತು ರನ್ಯಾ ರಾವ್ ತಂದೆ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಿ ವರದಿ ಕೊಡಲು ಆದೇಶ ಮಾಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: