ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ - Mahanayaka

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ

ravi
28/01/2022

ಬೆಂಗಳೂರು, ಜ. 27: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು.
ಇದೀಗ ರವಿ ಡಿ. ಚನ್ನಣ್ಣನವರ್  ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಭೀಮಾ ಶಂಕರ್ ಗುಳೇದ್ ಅವರನ್ನು ಪೂರ್ವ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಅಬ್ದುಲ್ ಅಹಾದ್ ಅವರನ್ನು ಕೆಎಸ್‌ಆರ್‌ಟಿಸಿ ಭದ್ರತೆ ಮತ್ತು ಜಾಗೃತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕೊಪ್ಪಳದ ಎಸ್ಪಿ ಟಿ. ಸುಧೀರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕಾರಾಗೃಹ ಇಲಾಖೆಯ ಎಸ್ಪಿ ಟಿ.ಪಿ. ಶಿವಕುಮಾರ್ ಅವರನ್ನು ಚಾಮರಾಜ ನಗರ ಜಿಲ್ಲೆ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ದಿವ್ಯ ಸಾರಾ ಥಾಮಸ್ ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ ಹುದ್ದೆಗೆ ನಿಯೋಜಿಸಲಾಗಿದೆ. ಡೆಕ್ಕ ಕಿಶೋರ್ ಬಾಬು ಅವರು ಬೀದರ್ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ. ಎ. ಗಿರಿ ಅವರನ್ನು ಕೊಪ್ಪಳದ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೀದರ್ ಎಸ್ಪಿಯಾಗಿದ್ದ ನಾಗೇಶ್ ಡಿ.ಎಲ್. ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ

ಎಸ್ಸಿ-ಎಸ್ಟಿಗೆ ಬಡ್ತಿ ಮೀಸಲಾತಿ: ಮಾನದಂಡ ಹಾಕಲು ಸುಪ್ರೀಂ ಕೋರ್ಟ್‌ ನಿರಾಕರಣೆ

ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು

ದೇಶದಲ್ಲಿ ಬುರ್ಖಾ ನಿಷೇಧಿಸಬೇಕು:ವಿವಾದಾತ್ಮಕ ಸ್ವಾಮೀಜಿ ರಿಷಿ ಕುಮಾರ್​

ಇಂದು ಬಿಹಾರ ಬಂದ್: ನಾಲ್ವರ ಬಂಧನ

 

ಇತ್ತೀಚಿನ ಸುದ್ದಿ