ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಆರೋಗ್ಯ ವಿಚಾರಿಸಿದ ಈಶ್ವರ ಖಂಡ್ರೆ
ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದು ಬೆಂಗಳೂರು ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅವರನ್ನಿಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿನ ಜನರ ಅಷ್ಟೇ ಅಲ್ಲದೆ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀವು ಬೇಗ ಗುಣಮುಖರಾಗಿ ವೃಕ್ಷಪ್ರೇಮಿಗಳಿಗೆ ಮಾರ್ಗದರ್ಶನ ಮಾಡಬೇಕು, ಪ್ರೇರಣೆ ನೀಡಬೇಕು ಎಂದು ತಿಳಿಸಿದ್ದಾರೆ ಎಂದು ಈಶ್ವರ ಖಂಡ್ರೆ ಈ ಸಂದರ್ಭದಲ್ಲಿ ತಿಮ್ಮಕ್ಕ ಅವರಿಗೆ ತಿಳಿಸಿದರು.
ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಈಶ್ವರ ಖಂಡ್ರೆ ಹೆಚ್ಚಿನ ಕಾಳಜಿ ವಹಿಸುವಂತೆ ವೈದ್ಯರಿಗೆ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw