ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಮೂಡಿಗೆರೆ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಈಶ್ವರಿ ಸಿರಿಗಂಧ - Mahanayaka
1:25 AM Wednesday 11 - December 2024

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಮೂಡಿಗೆರೆ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಈಶ್ವರಿ ಸಿರಿಗಂಧ

eswari
09/05/2023

ಕೊಟ್ಟಿಗೆಹಾರ:ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಈಶ್ವರಿ ಸಿರಿಗಂಧ 616 (ಶೇ99) ಅಂಕ ಪಡೆಯುವ ಮೂಲಕ ಮೂಡಿಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಫಲ್ಗುಣಿ ಗ್ರಾಮದ ಜಯಪ್ರಕಾಶ್ ಮತ್ತು ಸುಪ್ರಿತಾ ದಂಪತಿಗಳ ಪುತ್ರಿ ಈಶ್ವರಿ ಸಿರಿಗಂಧ, ಕನ್ನಡ ೧೨೪, ಇಂಗ್ಲಿಷ್ 99 ಹಿಂದಿ98, ಗಣಿತ99, ವಿಜ್ಞಾನ 97, ಸಮಾಜ ವಿಜ್ಞಾನ ವಿಷಯದಲ್ಲಿ 99 ಅಂಕ ಪಡೆದು ಒಟ್ಟು616ಅಂಕ ಪಡೆಯುವ ಮೂಲಕ ತಾಲ್ಲೂಕಿಗೆ ಟಾಪರ್ ಎನಿಸಿಕೊಂಡಿದ್ದಾರೆ.

ವಿಧ್ಯಾರ್ಥಿನಿ ಈಶ್ವರಿ ಸಿರಿಗಂಧ ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದು ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ವಿಧ್ಯಾರ್ಥಿನಿ ಈಶ್ವರಿ ಸಿರಿಗಂಧ, ಅಂದು ಮಾಡಿದ ಪಾಠವನ್ನು ಅಂದೇ ಓದಿ ಮನನ ಮಾಡಿಕೊಳ್ಳುತ್ತಿದ್ದೆ. ಪರೀಕ್ಷೆ ಸಮೀಪಿಸುತ್ತಿರುವಾಗ ಪುನರಾರ್ವತನೆ ಓದಿಕೊಳ್ಳುತ್ತಿದ್ದೆ. ಕಷ್ಟ ಪಟ್ಟು ಓದುವುದಕ್ಕಿಂದ ಇಷ್ಟ ಪಟ್ಟು ಓದುತ್ತಿದ್ದೆ. ಮನೆಯಲ್ಲಿ ಕೂಡ ಓದಿನ ಬಗ್ಗೆ ಯಾವುದೇ ಒತ್ತಡಗಳಿರಲಿಲ್ಲ.

ಪೋಷಕರು, ಶಿಕ್ಷಕರ ಸಹಕಾರದೊಂದಿಗೆ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಮುಂದೆ ಐಎಎಸ್ ಮಾಡುವ ಗುರಿ ಇದೆ. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಅಂಕವನ್ನು ಪಡೆಯಲು ಕಾರಣರಾದ ಪೋಷಕರು ಮತ್ತು ಶಿಕ್ಷಕರಿಗೆ ಧನ್ಯವಾದ ತಿಳಿಸಿಸುತ್ತೇನೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ