ಎಲ್ಲದರಲ್ಲೂ ತಪ್ಪು ಹುಡುಕುವುದು ವಿಕೃತಿ: ಸಚಿವ ಸುನೀಲ್ ಕುಮಾರ್

ಉಡುಪಿ: ಎಲ್ಲದರಲ್ಲೂ ತಪ್ಪು ಹುಡುಕುವುದು, ವಿಕೃತಿಗಳನ್ನು ಯೋಚಿಸುವುದು ಸರಿಯಲ್ಲ. ಲೇಖಕ, ಸಾಹಿತಿ ಆಗಿರುವ ರೋಹಿತ್ ಚಕ್ರತೀರ್ಥ ಅವರನ್ನು ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಕರೆಯುವುದು ತಪ್ಪಲ್ಲ. ರಾಷ್ಟ್ರೀಯ ವಿಚಾರಗಳನ್ನು ಹಿಡಿದುಕೊಂಡು ಬರೆಯುವ ವ್ಯಕ್ತಿಯನ್ನು ಆಹ್ವಾನಿಸಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ರಾಷ್ಟ್ರೀಯ ವಿಚಾರಗಳನ್ನು ಬೆಂಬಲಿಸುತ್ತದೆ. ಈ ವಿಚಾರದಡಿಯಲ್ಲಿ ಕೆಲಸ ಮಾಡುವ ಪಾರ್ಟಿ ನಮ್ಮದು. ರೋಹಿತ್ ಚಕ್ರತೀರ್ಥ ಮಾತ್ರವಲ್ಲ, ಇಂತಹ ರಾಷ್ಟ್ರೀಯ ವಿಚಾರಧಾರೆಗಳನ್ನು ಹೊಂದಿರುವ ಇನ್ನು ಹತ್ತು ಜನರನ್ನು ಕರೆಯುತ್ತೇವೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw