ಹೊರ ದೇಶದಲ್ಲಿ ರಾಹುಲ್ ಗಾಂಧಿ ಭಾರತದ ಬಗ್ಗೆ ಹಗುರವಾಗಿ ಮಾತನಾಡಿರುವುದು ಶೋಭೆ ತರಲ್ಲ: ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ - Mahanayaka
5:57 PM Thursday 12 - December 2024

ಹೊರ ದೇಶದಲ್ಲಿ ರಾಹುಲ್ ಗಾಂಧಿ ಭಾರತದ ಬಗ್ಗೆ ಹಗುರವಾಗಿ ಮಾತನಾಡಿರುವುದು ಶೋಭೆ ತರಲ್ಲ: ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ

bs yediyurappa
07/03/2023

ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ 140 ಸೀಟು ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಮಾಜಿ ಮುಖ್ಯಮಂತ್ರಿ ಮತ್ತು ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಕಲಬುರ್ಗಿ ವಿಭಾಗದಲ್ಲಿ ವಿಜಯ ಸಂಕಲ್ಪ ರಥಯಾತ್ರೆಗೆ ಪೂರ್ವಭಾವಿಯಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಜನ ಸೇರುತ್ತಿಲ್ಲ. ನಮ್ಮ ಯಾತ್ರೆಯಲ್ಲಿ ಉತ್ಸಾಹದಿಂದ ಜನರು ಸೇರುತ್ತಿದ್ದಾರೆ. ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ. ಪ್ರಧಾನಿ ನರೇಂದ್ರ ಮೋದಿಜಿ, ಅಮಿತ್ ಶಾ ಜೀ ಮತ್ತಿತರ ನಾಯಕರ ಭೇಟಿಯು ಬಿಜೆಪಿ ಬಲವನ್ನು ಹೆಚ್ಚಿಸಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರು ಕೇವಲ ಟೀಕೆ ಮಾಡುವುದರಲ್ಲೇ ಸಮಯ ಕಳೆಯುತ್ತಿದ್ದಾರೆ. ಜವಾಬ್ದಾರಿಯುತ ನಾಯಕರಾದ ರಮೇಶ್‍ಕುಮಾರ್ ಅವರು, ನಾವೆಲ್ಲ ಸಾಕಷ್ಟು ಮಾಡಿಕೊಂಡಿದ್ದೇವೆ; ತೃಪ್ತಿ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಇದಕ್ಕೆ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಉತ್ತರ ಕೊಡಬೇಕು ಎಂದು ವಿನಂತಿಸಿದರು.

ಲೋಕಾಯುಕ್ತವನ್ನು ಮುಚ್ಚಿಸಿದ್ದಕ್ಕೆ ಉತ್ತರ ಕೊಡಬೇಕು ಎಂದ ಅವರು, ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಿದೆ ಎಂದು ತಿಳಿಸಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿ 54 ಲಕ್ಷ ರೈತರಿಗೆ ಪ್ರಯೋಜನ ಸಿಗುತ್ತಿದೆ. ಭೂಸಿರಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ರೈತ ಶಕ್ತಿ ಯೋಜನೆಯಡಿ ಡೀಸೆಲ್ ಸಬ್ಸಿಡಿ ನೀಡುತ್ತಿದ್ದು, ಕೂಲಿ ಕಾರ್ಮಿಕ ಮಹಿಳೆಯರಿಗೆ 1 ಸಾವಿರ ಕೊಡುವ ಘೋಷಣೆ ಮಾಡಿದ್ದೇವೆ ಎಂದ ಅವರು ಕೇಂದ್ರ- ರಾಜ್ಯ ಸರಕಾರಗಳ ಜನಪರ ಯೋಜನೆಗಳ ವಿವರ ಕೊಟ್ಟರು. ಮೀಸಲಾತಿ ಹೆಚ್ಚಳದ ಕುರಿತು ಮಾಹಿತಿ ನೀಡಿದರಲ್ಲದೆ, ಬಿಜೆಪಿ ಗೆಲುವು ಶತಸ್ಸಿದ್ಧ ಎಂದು ತಿಳಿಸಿದರು.

ರಾಹುಲ್ ಗಾಂಧಿಯವರು ಹೊರದೇಶಕ್ಕೆ ಹೋಗಿ ಭಾರತದ ಬಗ್ಗೆ ಹಗುರವಾಗಿ ಮಾತನಾಡುವುದು ಇದು ಮೊದಲಲ್ಲ. ಇದು ಶೋಭೆ ತರುವ ವಿಚಾರವಲ್ಲ. ಅವರು ದೇಶದ ಜನರ ಮುಂದೆ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಭಗವಂತ ಖೂಬಾ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಕರ್ನಾಟಕ ಮರಾಠಾ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಮಾರುತಿ ರಾವ್ ಮುಳೆÉ, ಕಲಬುರಗಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮುಖಂಡರಾದ ಸುಭಾμï ಗುತ್ತೇದಾರ್, ಸುನೀಲ್ ವಲ್ಯಾಪುರೆ, ಕಲಬುರಗಿ ಜಿಲ್ಲೆಯ ಬಿಜೆಪಿ ಸ್ಥಳೀಯ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು. ಬಳಿಕ ವಿವಿಧೆಡೆ ರೋಡ್ ಷೋ ನಡೆಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ