ಮಾದಕ ದ್ರವ್ಯ ಸೇವನೆಗೆ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಖೇದಕರ: ಕೆ.ಕೆ.ಎಂ ಕಾಮಿಲ್ ಸಖಾಫಿ ಕೃಷ್ಣಾಪುರ
ಮಾದಕ ದ್ರವ್ಯ ಸೇವನೆಗೆ ಪ್ರಾಥಮಿಕ ಶಾಲೆಯಿಂದ ಆರಂಭಗೊಂಡು ಪದವಿ, ಸ್ನಾತಕೋತ್ತರ ಪದವಿ ಪಡೆದವರೂ ಸಹ ಇದಕ್ಕೆ ಬಲಿಯಾಗಿರುವುದು ಖೇದಕರ ಸಂಗತಿಯಾಗಿದೆ ಎಂದು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ ಕೃಷ್ಣಾಪುರ ತಿಳಿಸಿದ್ದಾರೆ.
ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 21ರಂದು ಎಸ್ ಜೆ ಎಂ ನೇತೃತ್ವದಲ್ಲಿ ಮಾದಕದ್ರವ್ಯ ವಿರೋಧಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ. ಈ ರಾಲಿ ರಾಜ್ಯಾದ್ಯಂತ ಜನವರಿ 21ರಂದು ಅಪರಾಹ್ನ 3ರಿಂದ 5ಗಂಟೆಯವರೆಗೆ ನಡೆಯಲಿದೆ.
ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ರಾಜ್ಯ ಸಮಿತಿಯು, “ಮಾದಕ ದ್ರವ್ಯ ಆವೇಶ ಸಮಾಜದ ವಿನಾಶ” ಎಂಬ ಘೋಷಣೆಯೊಂದಿಗೆ, ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ರಾಜ್ಯದ ಸಾವಿರಕ್ಕೂ ಅಧಿಕ ಮದ್ರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿರುವ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ, ಎರಡು ಸಾವಿರದಷ್ಟು ಸಂಖ್ಯೆಯ ಮದ್ರಸಾ ಅಧ್ಯಾಪಕರ ನೇತೃತ್ವದಲ್ಲಿ ಹಾಗೂ ಮದ್ರಸ ಆಡಳಿತ ಸಮಿತಿ, ಸ್ಥಳೀಯ ಸುನ್ನೀ ಸಂಘ ಕುಟುಂಬಗಳ ಸಹಕಾರದೊಂದಿಗೆ, ರೇಂಜ್ ಕೇಂದ್ರಗಳಲ್ಲಿ ಮದ್ರಸ ವಿದ್ಯಾರ್ಥಿಗಳಿಂದ ಬಾಲ ಮಸೀರ (ವಿದ್ಯಾರ್ಥಿ ರಾಲಿ) ಹಾಗೂ ಸಂದೇಶ ಭಾಷಣ ಹಮ್ಮಿಕೊಳ್ಳಲಾಗಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw