ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ
ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದಾಳಿ ನಡೆದಿದೆ.
ರಾಜಕೀಯದ ಹೊರತಾಗಿ ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ಯಮದಲ್ಲಿ ತೊಡಗಿದ್ದರು. ಜಮೀರ್ ಅವರ ನಿವಾಸ, ಕಚೇರಿ, ಫ್ಲ್ಯಾಟ್ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಜಮೀರ್ ಅವರ ನ್ಯಾಷನಲ್ ಟ್ರಾವೆಲ್ಸ್ ಕಚೇರಿಯ ಮೇಲೆಯೂ ದಾಳಿ ನಡೆಸಲಾಗಿದೆ.
ದಾಳಿಯ ಬಳಿಕ ಎರಡೂವರೆ ಗಂಟೆಗಳವರೆಗೆ ನಿರಂತರವಾಗಿ ಶೋಧ ನಡೆಸಿದ್ದು, ಮನೆ ಮತ್ತು ಫ್ಲ್ಯಾಟ್ , ಕಚೇರಿಗಳಲ್ಲಿ ದೊರಕಿರುವ ಹಣ ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನಷ್ಟು ಸುದ್ದಿಗಳು…
ಪ್ರೀತಿಗೆ ದ್ರೋಹ ಬಗೆದ ಪತ್ನಿ, ಸ್ನೇಹಕ್ಕೆ ದ್ರೋಹ ಬಗೆದ ಸ್ನೇಹಿತ | ತಂದೆಯ ಹತ್ಯೆಯಿಂದ ಅನಾಥಳಾದ ಮಗಳು!
ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿ ಅರೆಸ್ಟ್
ಮಹಿಳೆಯ ಸೀರೆಯ ಪಿನ್ ಚುಚ್ಚಿ ಮಾಜಿ ಸಿಎಂ ಯಡಿಯೂರಪ್ಪನವರ ಕೈಗೆ ಗಾಯ!
ಸಿಎಂ ರೇಸ್ ನಲ್ಲಿದ್ದ ಬೆಲ್ಲದ್ ಗೆ ಸಚಿವ ಸ್ಥಾನವೂ ಸಿಗಲಿಲ್ಲ | ಶೆಟ್ಟರ್, ಬಿಎಸ್ ವೈಗೆ ಧಿಕ್ಕಾರ ಹೇಳಿದ ಬೆಂಬಲಿಗರು