ಕಾಫಿನಾಡಿಗೆ ತಂಪೆರೆದ ಮಳೆರಾಯ: ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆ

22/03/2025
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ಜನ ಮಳೆಯಿಂದಾಗಿ ತಂಪಾಗಿದ್ದಾರೆ.
ಸುಮಾರು ಅರ್ಧಗಂಟೆಗಳಿಗೂ ಹೆಚ್ಚು ಹಾಲ ಮಳೆ ಸುರಿದಿದ್ದು, ಉತ್ತಮ ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿ ನಾಡಿಗರಿಗೆ ಮಳೆರಾಯ ತಂಪೆರೆದಿದ್ದಾನೆ.
ಮಳೆಯಿಂದ ನಗರ ಹಾಗೂ ಗ್ರಾಮೀಣ ಭಾಗದ ಜನರಲ್ಲಿ ಸಂತಸ ಮೂಡಿದೆ. ಬಿಸಿಲ ಧಗೆಯಿಂದಾಗಿ ಸಾರ್ವಜನಿಕರು ಕಂಗೆಟ್ಟಿದ್ದರು. ಕೂಲಿ ಕಾರ್ಮಿಕರಂತೂ ಬಿಸಿಲಿನ ಏಟಿಗೆ ಕಂಗೆಟ್ಟಿದ್ದರು. ಮಳೆಯಿಂದ ಭೂಮಿ ತಂಪಾಯ್ತೆಂದು ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: