5 ದಿನಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ವರದಿ ಹೀಗಿದೆ - Mahanayaka

5 ದಿನಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ವರದಿ ಹೀಗಿದೆ

rain
29/04/2023

ಬೆಂಗಳೂರು: ಈಗಾಗಲೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Provided by

ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಏಪ್ರಿಲ್ 30 ರಂದು ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮೈಸೂರು, ದಾವಣಗೆರೆ ಜಿಲ್ಲೆಯಲ್ಲಿ ಏಪ್ರಿಲ್ 30 ರಿಂದ 3 ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮೇ 2ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 24 ಗಂಟೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ