ITBP ಇಲಾಖೆಯಲ್ಲಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ

itbp
14/01/2025

ITBP Constable Recruitment 2025:  ಭಾರತ ಮತ್ತು ಟಿಬೇಟಿಯನ್ ಗಡಿಯ ಭದ್ರತೆ ಮತ್ತು ಸುರಕ್ಷಿತೆಯ ಮುಖ್ಯ ಕಾರ್ಯ ನಿರ್ವಹಿಸುತ್ತಿರುವ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 51 ವಿವಿಧ ಹುದ್ದೆಗಳನ್ನು ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳ ವಿಂಗಡಣೆ ಈ ಕೆಳಗಿನಂತಿದೆ.

* ಹೆಡ್ ಕಾನ್ಸ್ಟೇಬಲ್ ಮೋಟಾರ್ ಮೆಕ್ಯಾನಿಕ್ : 7 ಹುದ್ದೆಗಳು

* ಕಾನ್ಸ್ಟೇಬಲ್ ಮೋಟಾರ್ ಮೆಕ್ಯಾನಿಕ್ :  44 ಹುದ್ದೆಗಳು

ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು :

* ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವವರು 12th ಪಾಸಾಗಿ, ಮೆಕ್ಯಾನಿಕ್ ವಿಭಾಗದಲ್ಲಿ ಐಟಿಐ ಮುಗಿಸಿದ್ದು ಅದರ ಜೊತೆಗೆ 3 ವರ್ಷದ ಅನುಭವ ಹೊಂದಿರಬೇಕು.

* ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು 10th ಪಾಸಾಗಿ, ಐಟಿಐ ಮೆಕ್ಯಾನಿಕಲ್ ಮುಗಿಸಿ ಅನುಭವ ಹೊಂದಿರಬೇಕು.

ನೇಮಕಾತಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?

ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಿ ನಂತರ ದೈಹಿಕ ಹಾಗೂ ಪ್ರಾಯೋಗಿಕ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಯಾವಾಗ? — ಜನವರಿ 22, 2025

ಅರ್ಜಿ ಸಲ್ಲಿಸುವ ವೆಬ್ಸೈಟ್ ವಿಳಾಸ : https://recruitment.itbpolice.nic.in/rect/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ

Exit mobile version