ಸರ್ಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ರೆ ಕುಕ್ಕರ್ ಬಾಂಬ್ ಸ್ಫೋಟ ಆಗ್ತಿರಲಿಲ್ಲ: ಮಾಜಿ ಶಾಸಕ ಜೆ.ಆರ್. ಲೋಬೋ - Mahanayaka
8:13 AM Thursday 12 - December 2024

ಸರ್ಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ರೆ ಕುಕ್ಕರ್ ಬಾಂಬ್ ಸ್ಫೋಟ ಆಗ್ತಿರಲಿಲ್ಲ: ಮಾಜಿ ಶಾಸಕ ಜೆ.ಆರ್. ಲೋಬೋ

j r lobo
29/11/2022

ಮಂಗಳೂರು: ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದ್ದಾರೆ.

ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯದ ಒಬ್ಬ ವ್ಯಕ್ತಿಯ ಅಪರಾಧಕ್ಕೆ ಇಡೀ ಸಮುದಾಯವನ್ನು ಸಂಶಯಿಸುವ, ಅನುಮಾನದಿಂದ ನೋಡುವ ಪ್ರಕ್ರಿಯೆ ನಡೆಯುತ್ತಿರುವುದು ಖಂಡನೀಯ. ಜನತೆ ಇಂತಹ ಊಹಾಪೋಹ, ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಸೌಹಾರ್ದತೆ ಕಾಪಾಡಬೇಕು ಎಂದು ಕರೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ