ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ: ವ್ಯಕ್ತಿಯ ಮೇಲೆ ಹಲ್ಲೆ, ಜಗಳ ಬಿಡಿಸಲು ಬಂದವನ ಕೊಲೆ
ಬೆಳ್ತಂಗಡಿ: ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು , ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೆ ಹಲ್ಲೆ ನಡೆದಿದ್ದು ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಜ.22 ರಂದು ರಾತ್ರಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಮೃತಪಟ್ಟವರು. ಆರೋಪಿತ ನಾರಾಯಣ ನಾಯ್ಕ್(47) ಎಂಬವರು ಸ್ಥಳೀಯ ಆರು ವರ್ಷದ ಬಾಲಕಿಗೆ ಕಳೆದ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಅದಾಗಲೆ ರಾಜಿ ಸಂದಾನ ನಡೆದಿತ್ತು. ಆದರೆ ಇಂದು ಸಂಜೆ ವೇಳೆ ಮತ್ತೆ ಬಾಲಕಿಯನ್ನು ಕರೆದು ಮಾತಾಡಿಸಿದ್ದನ್ನು ಯಾರೋ ನೋಡಿದ ಹಿನ್ನೆಲೆ ನಾರಾಯಾಣ ನಾಯ್ಕ್ ಅವರನ್ನು ಯುವಕರ ತಂಡ ತಡೆದು ಹಲ್ಲೆಗೆ ಮುಂದಾಗಿದೆ.
ಯುವಕರ ಜಗಳ ನೋಡಿದ ಜಾರಪ್ಪ ನಾಯ್ಕ್ ಹಲ್ಲೆ ತಪ್ಪಿಸಲು ಬಂದಾಗ ಯುವಕರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೆ ಒಳಗಾಗಿ ಬಿದ್ದಿದ್ದ ಜಾರಪ್ಪ ನಾಯ್ಕ್ ಮತ್ತು ನಾರಾಯಣ ನಾಯ್ಕ್ ಅವರನ್ನು ಜಾರಪ್ಪ ಅವರ ಮಗ ರಾಜಶೇಖರ್ ಬಂದು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಈ ವೇಳೆ ಜಾರಪ್ಪ ಸಾವನ್ನಪ್ಪಿದ್ದಾರೆ .
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು ನಾರಾಯಣ ನಾಯ್ಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಜಾರಪ್ಪ ನಾಯ್ಕ್ ಅವರ ಪುತ್ರ ರಾಜಶೇಖರ್ ದೂರು ನೀಡಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka