ಬಿಜೆಪಿಗೆ ಜಗದೀಶ್ ಶೆಟ್ಟರ್ ರಾಜೀನಾಮೆ: ಸಿಎಂ ರೇಸ್ ಗೆ ಬರುವ ಭಯದಿಂದ ಟಿಕೆಟ್ ನೀಡಿಲ್ಲ ಎಂದು ಆರೋಪ
ಹುಬ್ಬಳ್ಳಿ: ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಮಾತುಕತೆ ವಿಫಲವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯ ನಿರ್ಧಾರವನ್ನು ಪ್ರಕಟಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ, ಶೆಟ್ಟರ್ ಸಿಎಂ ರೇಸ್ ಗೆ ಬರ್ತಾರೆ ಎಂಬ ಭಯವಿದೆ. ಹಾಗಾಗಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಶೆಟ್ಟರ್ ಆರೋಪಿಸಿದ್ದು, ನಾನು ಸ್ಪರ್ಧೆ ಮಾಡುವುದು ಖಚಿತ, ಪ್ರಮುಖರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಶೆಟ್ಟರ್ ತಿಳಿಸಿದರು.
ಇನ್ನೂ ಶೆಟ್ಟರ್ ಅವರನ್ನು ಮನವೊಲಿಸಲು ಮುಂದಾಗಿದ್ದ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬೊಮ್ಮಾಯಿ ರಾತ್ರಿಯವರೆಗೆ ಜಗದೀಶ್ ಶೆಟ್ಟರ್ ನಿವಾಸದಲ್ಲಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw