ಅರೆಸ್ಟ್: ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಲ್ಲಿ ಬಂಧನ
ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮತ್ತು ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.
ಕೆನಡಾದಲ್ಲಿ ವಾಸಿಸುತ್ತಿದ್ದ ಮತ್ತು ಯುಎಸ್ ಗೆ ನಿಯಮಿತವಾಗಿ ಪ್ರಯಾಣಿಸುತ್ತಿದ್ದ ಅನ್ಮೋಲ್, ಜೈಲಿನಲ್ಲಿದ್ದರೂ ಜಾಗತಿಕ ಕ್ರಿಮಿನಲ್ ಸಿಂಡಿಕೇಟ್ ನಡೆಸುತ್ತಿದ್ದ ಆರೋಪ ಹೊತ್ತಿರುವ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ.
ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಅಕ್ಟೋಬರ್ 12 ರಂದು ಎನ್‌ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಸಿದ್ದಿಕಿ ಅವರ ಹತ್ಯೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನ್ಮೋಲ್ ಬಿಷ್ಣೋಯ್ ಬೇಕಾಗಿದ್ದಾರೆ. ಈ ವರ್ಷದ ಏಪ್ರಿಲ್ 14 ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಅವರು ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj