ಜೈಲಿನಲ್ಲಿ ಅಗ್ನಿ ಅವಘಡ: 20 ಕೈದಿಗಳು ಆಸ್ಪತ್ರೆಗೆ ದಾಖಲು
ಅಂಕಾರ: ಇಸ್ತಾಂಬುಲ್ ನ ಉಮ್ರಾನಿಯೇ ಜೈಲಿನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, 20 ಕೈದಿಗಳು ಸೇರಿ ಒಬ್ಬ ಜೈಲಿನ ವಾರ್ಡನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಟರ್ಕಿಯ ನ್ಯಾಯ ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಟರ್ಕಿಯ ಜೈಲಿನಲ್ಲಿದ್ದ ಕೈದಿಗಳು ಬಂಧನದ ಪರಿಸ್ಥಿತಿಗಳನ್ನು ಪ್ರತಿಭಟಿಸಿ ಹಾಸಿಗೆಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಣಾಮ ಬೆಂಕಿ ಜೈಲಿನ ಎಲ್ಲೆಡೆ ಹಬ್ಬಿದೆ. ಬೆಂಕಿ ನಂದಿಸಲು ನೆರೆಯ ಜಿಲ್ಲೆಗಳಿಂದ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಸದ್ಯ ಯಾರೊಬ್ಬರ ಸ್ಥಿತಿಯೂ ಗಂಭೀರವಾಗಿಲ್ಲ. ಎಲ್ಲವನ್ನೂ ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
ಬೆಂಕಿ ಒಂದು ವಾರ್ಡ್ ನಲ್ಲಿ ಮೊದಲಿಗೆ ಉದ್ಭವವಾಗಿತ್ತು. ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದಾಗ ಅಗ್ನಿಶಾಮಕ ದಳವನ್ನು ಕರೆಸಲಾಯಿತು. ಬೆಂಕಿಯಿಂದಾಗಿ ಜೈಲಿನ ಪರಿಸ್ಥಿತಿ ಹದಗೆಟ್ಟಿದ್ದು, ಕೈದಿಗಳನ್ನು ಬಂಧನಕ್ಕೆ ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮತ್ತೊಂದು ವಿಮಾನ ದುರಂತ : ಪೈಲಟ್ ಸೇರಿ ಏಳು ಮಂದಿಯ ಸಾವು
ಕೇರಳದ ಡಾನ್ ಕೊಲೆ ಪ್ರಕರಣ: ಹಿಂಡಲಗಾ ಜೈಲಿನಲ್ಲಿ ಆರೋಪಿ ಅನುಮಾನಾಸ್ಪದ ಸಾವು
ಗಾನಕೋಗಿಲೆ ಲತಾ ಮಂಗೇಶ್ಕರ್ ಸ್ಥಿತಿ ಗಂಭೀರ
ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನ: ನಾಲ್ವರು ಆರೋಪಿಗಳ ಬಂಧನ
ಹಿರಿಯ ಛಾಯಾಗ್ರಾಹಕ ಡಿ.ಸಿ.ನಾಗೇಶ್ ನಿಧನ