ಜಲೀಲ್ ಹತ್ಯೆ ಪ್ರಕರಣದ ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ಆರೋಪಿಗಳಿಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು.
ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಸೆಕ್ಷನ್ 144 ಡಿಸೆಂಬರ್ 29ರವರೆಗೆ ಮುಂದುವರಿಕೆ:
ಮಂಗಳೂರು ನಗರದ ಕಾಟಿಪಳ್ಳದಲ್ಲಿ ಶನಿವಾರ ರಾತ್ರಿ ನಡೆದ ಜಲೀಲ್ ಕೊಲೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಿಸಲಾಗಿದ್ದ ಸೆಕ್ಷನ್ 144ನ್ನು ಡಿಸೆಂಬರ್ 29ರವರೆಗೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಡಿ.25ರ ಬೆಳಗ್ಗೆ 6ರಿಂದ ಡಿ.27ರ ಬೆಳಗ್ಗೆ 6ರವರೆಗೆ ಸೆ.144 ವಿಧಿಸಲಾಗಿತ್ತು. ಇದೀಗ ಡಿ.29ರ ಬೆಳಗ್ಗೆ 6ರವರೆಗೆ ಅದನ್ನು ಮುಂದುವರಿಸಲಾಗಿದೆ. ಈ ಅವಧಿಯಲ್ಲಿ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುವ 60 ವರ್ಷ ಮೇಲ್ಪಟ್ಟ ಮಹಿಳೆಯರ ಸಹಿತ ಹಿರಿಯರು ಮತ್ತು 18 ವರ್ಷ ಪ್ರಾಯದೊಳಗಿನ ಯುವಕರು, ಮಕ್ಕಳನ್ನು ಹೊರತುಪಡಿಸಿ ಉಳಿದವರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw