ಜಲೀಲ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

laxmisha devadiga
27/12/2022

ಮಂಗಳೂರು: ಕೃಷ್ಣಾಪುರದ ಜಲೀಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಾಟಿಪಳ್ಳ 4ನೇ ಬ್ಲಾಕ್‌ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ರಾತ್ರಿ  ಕೃಷ್ಣಾಪುರ 9ನೇ ಬ್ಲಾಕ್‌ ನಿವಾಸಿ ಜಲೀಲ್‌ ಅವರನ್ನು ಕಾಟಿಪಳ್ಳ 4ನೇ ಬ್ಲಾಕ್‌ನ ನೈತಂಗಡಿ ಎಂಬಲ್ಲಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.

ಈ ಸಂಬಂಧ ಆರೋಪಿಗಳಾದ ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬಾತನನ್ನು ಬಂಧಿಸಿದ್ದ ಸುರತ್ಕಲ್‌ ಪೊಲೀಸರು, ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಈ ಮೂಲಕ ಕೃಷ್ಣಾಪುರ ಜಲೀಲ್‌ ಕೊಲೆ ಪ್ರಕರಣದಲ್ಲಿ ಸುರತ್ಕಲ್‌ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version