ಜಾಮೀನಿನಲ್ಲಿ ಹೊರ ಬಂದ ಲೈಂಗಿಕ ಕಿರುಕುಳದ ಆರೋಪಿ ಸಂತ್ರಸ್ತೆಯನ್ನು ಗುಂಡಿಟ್ಟು ಕೊಂದ! - Mahanayaka
8:25 PM Saturday 14 - December 2024

ಜಾಮೀನಿನಲ್ಲಿ ಹೊರ ಬಂದ ಲೈಂಗಿಕ ಕಿರುಕುಳದ ಆರೋಪಿ ಸಂತ್ರಸ್ತೆಯನ್ನು ಗುಂಡಿಟ್ಟು ಕೊಂದ!

sagara
02/09/2021

ಸಾಗರ: ಲೈಂಗಿಕ ಕಿರುಕುಳದ ಆರೋಪಿಯೋರ್ವ ಜಾಮೀನಿನಲ್ಲಿ ಹೊರ ಬಂದು ಸಂತ್ರಸ್ತ ಯುವತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಡೆದಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾತ ಜಾಮೀನಿನ ಮೂಲಕ ಹೊರ ಬಂದ ತಕ್ಷಣವೇ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.

24 ವರ್ಷ ವಯಸ್ಸಿನ ರೋಹಿತ್ ರಜಪೂತ್ ಹತ್ಯೆ ಆರೋಪಿಯಾಗಿದ್ದು, 21 ವರ್ಷ ವಯಸ್ಸಿನ ಸಂತ್ರಸ್ತ ಯುವತಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ ಎಂದು ಯುವತಿಯ ಸಹೋದರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿ ರೋಹಿತ್  ಸಂತ್ರಸ್ತ ಯುವತಿಗೆ ಗುಂಡು ಹಾರಿಸಿದ ವೇಳೆ ಮನೆಯ ಇತರರು ಆತನ ಕೈಯಿಂದ ಬಂದೂಕನ್ನು ಕಿತ್ತುಕೊಂಡಿದ್ದು, ಈ ವೇಳೆ ಆರೋಪಿ ಮನೆಯವರ ಮೇಲೆ ಕಲ್ಲೆಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ರೋಹಿತ್ ನನ್ನ ತಂಗಿಗೆ ಬಹಳಷ್ಟು ಸಮಯಗಳಿಂದ ಕಿರುಕುಳ ನೀಡುತ್ತಿದ್ದು, ಆಕೆಯನ್ನು ಮದುವೆ ಮಾಡಿಕೊಡಬೇಕು ಎಂದು ಒತ್ತಡ ಹೇರಿದ್ದನು. ಜೊತೆಗೆ ಆಕೆಯನ್ನು ಮದುವೆ ಮಾಡಿಕೊಡದಿದ್ದರೆ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡ ಹೇಳಿದ್ದನು. ಆ ಬಳಿಕ ನಾವು ಪೊಲೀಸರಿಗೆ ದೂರು ನೀಡಿದ್ದೆವು. ಆ ಬಳಿಕ ಆತ ಜಾಮೀನನ ಮೂಲಕ ಹೊರಗೆ ಬಂದಾಗ, ಆತ ಬದಲಾಗಿದ್ದಾನೆ. ನಮ್ಮ ಕುಟುಂಬಕ್ಕೆ ತೊಂದರೆ ಕೊಡುವುದಿಲ್ಲ ಎಂದು ಭಾವಿಸಿದ್ದೆವು. ಆದರೆ ಆತ ನಮ್ಮ ತಂಗಿಯನ್ನು ಕೊಲ್ಲಲು ಮುಂದಾಗುತ್ತಾನೆ ಎನ್ನುವುದನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಸಂತ್ರಸ್ತೆಯ ಸಹೋದರ ದುಃಖ ವ್ಯಕ್ತಪಡಿಸಿದ್ದಾನೆ.

ಇನ್ನಷ್ಟು ಸುದ್ದಿಗಳು…

ಪಬ್ ನಲ್ಲಿ ಅಪ್ರಾಪ್ತ ಬಾಲಕಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್: ಪಬ್ ಮ್ಯಾನೇಜ್ ಮೆಂಟ್ ಗೆ ಸಂಕಷ್ಟ!

‘ವಿಕ್ರಾಂತ್ ರೋಣ’: ಡೆಡ್ ಮ್ಯಾನ್ ಆಂಥಮ್ ಸೃಷ್ಟಿಸಿತು ಹೊಸ ಕುತೂಹಲ!

ಖಾಸಗಿ ವಾಹಿನಿ, ವೆಬ್ ಪೋರ್ಟಲ್, ಸಾಮಾಜಿಕ ಮಾಧ್ಯಮಗಳಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸುದ್ದಿಗಳನ್ನು ಹರಡಲಾಗುತ್ತಿದೆ | ಸುಪ್ರೀಂ ಕೋರ್ಟ್ ಕಳವಳ

ಆತ್ಮಹತ್ಯೆ ಮಾಡಲು ನೀರಿಗೆ ಹಾರಿದ ಕುಡುಕನ ರಕ್ಷಣೆಗೆ ಹೋದ ಇಬ್ಬರು ಸಾವು | ಕುಡುಕ ಸೇಫ್!

ನೀರಿನ ಬಾಟಲಿಯೇ ಬೆಂಗಳೂರಿನ ಅಪಘಾತಕ್ಕೆ ಕಾರಣವಾಯ್ತೆ? | ಅಪಘಾತದ ವೇಳೆ ನಡೆದದ್ದೇನು?

ಮಹಿಳೆ ಜೊತೆಗೆ ಅಕ್ರಮ ಸಂಬಂಧ: ಕಾನ್‌ ಸ್ಟೇಬಲ್‌ ನ  ಕೈ ಕಾಲು ಕಟ್ಟಿ ಹಿಗ್ಗಾಮುಗ್ಗಾ ಥಳಿತ

ಇತ್ತೀಚಿನ ಸುದ್ದಿ