ದನ ಕಳ್ಳತನ ಪ್ರಕರಣದಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಕಮೀಷನರೇಟ್ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಸಲ್ಪಟ್ಟು ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗರೆಯ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ ಎಂಬಾತನನ್ನು ಬಂಧಿಸಲಾಗಿದೆ.
ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಈತ ಪರಾರಿಯಾಗಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ.
ಬಳಿಕ ಸಿಸಿಬಿ ಪೊಲೀಸರು ಆರೋಪಿ ಕಬೀರ್ ನನ್ನು ವಶಕ್ಕೆ ಪಡೆದು ಪಣಂಬೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಯ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಕಳೆದ 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka