ಜನಪದ ಕಲಾವಿದ ಮಹಾದೇವ ವೇಳಿಪ ನಿಧನ - Mahanayaka
1:58 AM Wednesday 11 - December 2024

ಜನಪದ ಕಲಾವಿದ ಮಹಾದೇವ ವೇಳಿಪ ನಿಧನ

vellapa
10/02/2022

ಕಾರವಾರ: ಕಳೆದ ಎರಡು ದಿನದಿಂದ ಅನಾರೋಗ್ಯ ಪೀಡಿತರಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ ಅವರು ಇಂದು ನಿಧನರಾಗಿದ್ದಾರೆ.
ಜೋಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದ ಮಹಾದೇವ ವೇಳಿಪ (90) ಅವರು ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

ನೂರಾರು ಬಗೆಯ ಗೆಡ್ಡೆ ಗೆಣಸುಗಳನ್ನು ಉಳಿಸಿ ಬೆಳಸುವುದರ ಜೊತೆ ಅರಣ್ಯ ಸಂರಕ್ಷಣೆ ಸಹ ಮಾಡಿದ್ದ ಮಹಾದೇವ ವೇಳಿಪ ಅವರು ಜನಪದ ಹಾಡುಗಳನ್ನು ಸಾವಿರ ಲೆಕ್ಕದಲ್ಲಿ ನಿರಂತರವಾಗಿ ಹಾಡುತ್ತಿದ್ದರು. ನಾಟಿ ವೈದ್ಯ ಸಹ ಆಗಿದ್ದ ಇವರ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಣಕಾಸಿನ ವಿಚಾರಕ್ಕೆ ಪತಿ, ಮಾವನಿಂದ ಮಹಿಳೆಯ ಕೊಲೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು

ಭೀಕರ ಅಪಘಾತ: ಮಾಜಿ ಶಾಸಕ ಎಸ್.ಬಾಲರಾಜು ಸೇರಿ ಮೂವರಿಗೆ ಗಾಯ

ಹಿಜಾಬ್ -ಕೇಸರಿ ಶಾಲು ವಿವಾದ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ

ಮುಸ್ಲಿಂ ಶಿಕ್ಷಣ ಸಂಸ್ಥೆಯಲ್ಲಿ ಹಿಂದೂ ವಿದ್ಯಾರ್ಥಿನಿಯವರು ಬುರ್ಖಾ ಧರಿಸಬೇಕಾ?: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ

 

ಇತ್ತೀಚಿನ ಸುದ್ದಿ