ಜನ್ಮ ನೀಡಿದ ತಂದೆಗೆ ನಡು ಬೀದಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಇಬ್ಬರು ಮಕ್ಕಳು! - Mahanayaka
6:09 PM Wednesday 11 - December 2024

ಜನ್ಮ ನೀಡಿದ ತಂದೆಗೆ ನಡು ಬೀದಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಇಬ್ಬರು ಮಕ್ಕಳು!

haveri
04/09/2021

ಹಾವೇರಿ: ಜನ್ಮ ನೀಡಿದ ತಂದೆಯನ್ನೇ ಮಕ್ಕಳು ನಡು ಬೀದಿಯಲ್ಲಿ ಎಳೆದಾಡಿ, ಕಾಲಿನಿಂದ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

70 ವರ್ಷ ವಯಸ್ಸಿನ ಯಲ್ಲಪ್ಪ ವಡ್ಡರ ಮಕ್ಕಳಿಂದಲೇ ಹಲ್ಲೆಗೊಳಗಾದವರು ಎಂದು ಹೇಳಲಾಗಿದೆ. ಇವರ ಮಕ್ಕಳಾದ ಆನಂದ ಹಾಗೂ ಜಗದೀಶ ಎಂಬವರು ತಮ್ಮ ತಂದೆಯ ಮೇಲೆಯೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಮಕ್ಕಳಿಬ್ಬರು ಒಬ್ಬರಾದ ಮೇಲೆ ಇನ್ನೊಬ್ಬರು ತಮ್ಮ ತಂದೆಯ ಮೇಲೆ ಹಲ್ಲೆ ನಡೆಸಿದ್ದು, ಮಕ್ಕಳ ದಾಳಿಯಿಂದಾಗಿ ತಂದೆ ರಸ್ತೆಯಲ್ಲಿಯೇ ಪ್ರಜ್ಞಾಹೀನರಾಗಿ ಬಿದ್ದಿದ್ದಾರೆ ಎಂದು ವರದಿಯಾಗಿದ್ದು, ಬಳಿಕ ಗ್ರಾಮಸ್ಥರು ಯಲ್ಲಪ್ಪ ಅವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯು ಕಾಗಿನೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರ ನನಗಿಲ್ಲ, 2023ರ ಚುನಾವಣೆಗಾಗಿ ಕಾಯುತ್ತಿದ್ದೇನೆ | ಬಿ.ವೈ.ವಿಜಯೇಂದ್ರ

ನವದೆಹಲಿಯ ಎಐಸಿಸಿ ಕಟ್ಟಡದಲ್ಲಿ ಐವನ್ ಡಿಸೋಜ ಕಚೇರಿ ಉದ್ಘಾಟನೆ | ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ

ರೈಲಿನೊಳಗೆ ಬರೇ ಒಳ ಉಡುಪಿನಲ್ಲಿ ಓಡಾಡಿದ ಶಾಸಕ | ವಿಡಿಯೋ ವೈರಲ್

“ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲಿ” | ಶಾ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದ ಸಚಿವ ಈಶ್ವರಪ್ಪ!

ಹಲ್ಲಿನಿಂದಲೇ ರಿಬ್ಬನ್ ಕತ್ತರಿಸಿ ಶೋರೂಂ ಉದ್ಘಾಟಿಸಿದ ಸಚಿವ! | ಜಗತ್ತಿನಲ್ಲೇ ಇದು ಮೊದಲು!

ಟೋಯಿಂಗ್ ಮಾಡುವಾಗ ವಾಹನ ಮಾಲಿಕ ಸ್ಥಳದಲ್ಲೇ ಇದ್ದರೆ, ನೋ ಪಾರ್ಕಿಂಗ್ ಶುಲ್ಕ ಪಡೆದು ವಾಹನ ಬಿಟ್ಟುಕೊಡಬೇಕು | ಸಚಿವ ಆರಗ ಜ್ಞಾನೇಂದ್ರ ಸೂಚನೆ

ಇತ್ತೀಚಿನ ಸುದ್ದಿ