ವಡಾಪಾವ್ ತಿಂದ ಜಪಾನ್ ರಾಯಭಾರಿ ಹಿರೋಶಿ: ಪ್ರಧಾನಿ ಹೇಳಿದ್ದೇನು ಗೊತ್ತಾ..?
ಜಪಾನ್ ರಾಯಭಾರಿ ಹಿರೋಶಿ ಸುಜುಕಿ ಅವರು ಪುಣೆಯಲ್ಲಿ ತಮ್ಮ ಪತ್ನಿಯೊಂದಿಗೆ ವಡಾ ಪಾವ್ ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಜಪಾನ್ ರಾಯಭಾರಿ ಸುಜುಕಿ ಈ ಕುರಿತು ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ನನ್ನ ಪತ್ನಿ ನನ್ನನ್ನು ಸೋಲಿಸಿದ್ದಾಳೆ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ನರೇಂದ್ರ ಮೋದಿಯವರು, ಸೋತಿದ್ದಕ್ಕೆ ಬೇಸರ ಪಡಬೇಡಿ. ನೀವು ಭಾರತೀಯ ತಿನಿಸುಗಳನ್ನು ಆನಂದಿಸುವುದನ್ನು ನೋಡಲು ಸಂತೋಷವಾಗುತ್ತದೆ. ಇಂತಹ ವಿಡಿಯೋಗಳು ಮತ್ತಷ್ಟು ಬರಲಿ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw