ಜಾರ್ಖಂಡ್ ದೋಣಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ - Mahanayaka

ಜಾರ್ಖಂಡ್ ದೋಣಿ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

boat
01/03/2022

ರಾಂಚಿ: ಜಾರ್ಖಂಡ್‍ ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಗುರುವಾರ ಸಂಜೆ ಪ್ರಯಾಣಿಕ ದೋಣಿ ಮುಳುಗಡೆಯಾಗಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Provided by

ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಾರ್ಖಂಡ್‍ ನ ಜಮ್ತಾರಾದ ದಾಮೋದರ್ ನದಿಯ ಬಾರ್ಬೆಂಡಿಯಾ ಸೇತುವೆಯ ಬಳಿ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ.

ಸೋಮವಾರ ಆರು ಮೃತದೇಹಗಳು ಪತ್ತೆಯಾಗಿದ್ದು, ಭಾನುವಾರ ಎಂಟು ಮಂದಿ ಶವ ಪತ್ತೆಯಾಗಿತ್ತು. ಇನ್ನೂ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಒಟ್ಟು ಈವರೆಗೂ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಜಮ್ತಾರಾ ಉಪ ಆಯುಕ್ತ ಫೈಜ್ ಅಹ್ಮದ್ ಮುಮ್ತಾಜ್ ತಿಳಿಸಿದ್ದಾರೆ.


Provided by

ಎನ್‌ಡಿ ಆರ್‌ ಎಫ್ ಡೈವರ್‌ ಗಳ ಹುಡುಕಾಟ ಬಹುತೇಕ ಮುಗಿದಿದೆ ಎಂದು ಅವರು ಹೇಳಿದರು. ಈ ಘಟನೆ ಕುರಿತಂತೆ ವಿಧಾನಸಭೆಯಲ್ಲಿ ನಿರ್ಸಾದ ಬಿಜೆಪಿ ಶಾಸಕಿ ಅಪರ್ಣಾ ಸೇನ್‍ಗುಪ್ತಾ ಅವರು ಕೇಳಿದ ಪ್ರಶ್ನೆಗೆ ಹೇಮಂತ್ ಸೋರೆನ್ ಅವರು, ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬದವರಿಗೆ ವಿಪತ್ತು ನಿರ್ವಹಣಾ ಇಲಾಖೆಯಿಂದ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವುಡ್​ ಕಾಂಪ್ಲೆಕ್ಸ್​​ ಬಳಿ ನಿಲ್ಲಿಸಿದ್ದ ಖಾಸಗಿ ಬಸ್​​​ಗಳಿಗೆ ಬೆಂಕಿ

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು

ಕೆಂಪುಕೋಟೆ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಪ್ರೀತಿಗೆ ಪೋಷಕರ ವಿರೋಧ: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ

ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ: ವಿದೇಶಿ ಪ್ರಜೆ ಸೆರೆ​​

 

ಇತ್ತೀಚಿನ ಸುದ್ದಿ