“ನನ್ನ ಜಾತಿ ನಿಂದನೆ ಮಾಡುತ್ತಿದ್ದಾರೆ” ಎಂದು ಆತ್ಮಹತ್ಯೆಗೆ ಯತ್ನಿಸಿದ ಬಿಲ್ ಕಲೆಕ್ಟರ್!
ಬಳ್ಳಾರಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ನನಗೆ ಕೆಲಸ ಮಾಡಲು ಬಿಡುತ್ತಿಲ್ಲ. ಜಾತಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಲ್ ಕಲೆಕ್ಟರ್ ವೊಬ್ಬರು ವಿಡಿಯೋ ಹರಿಯ ಬಿಟ್ಟು ವಿಷ ಸೇವಿಸಿದ ಘಟನೆ ನಡೆದಿದೆ.
ಬಿಲ್ ಕಲೆಕ್ಟರ್ ಹೆಚ್.ಶಿವಪ್ಪ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಈ ಘಟನೆಯು ಕಂಪ್ಲಿ ತಾಲೂಕಿನ ಮೇಟ್ರಿ ಗ್ರಾಮದಲ್ಲಿ ನಡೆದಿದ್ದು, ಇದೇ ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಶಿವಪ್ಪ ಅವರಿಗೆ ಜಾತಿ ನಿಂದನೆ ಮಾಡಿ ಕೆಲಸ ಮಾಡಲು ಅಡ್ಡಿ ಉಂಟು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ನನ್ನ ಸಾವಿಗೆ ಗಿರಿ, ಜರಿಗೌಡ, ಚಿದಾನಂದಪ್ಪ ಸದಸ್ಯರೇ ಕಾರಣ ಎಂದು ಶಿವಪ್ಪ ವಿಡಿಯೋದಲ್ಲಿ ಹೇಳಿದ್ದಾರೆ. ಇನ್ನೂ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ಶಿವಪ್ಪ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನಷ್ಟು ಸುದ್ದಿಗಳು…
ತನಗೆ ಕಚ್ಚಿದ ಹಾವನ್ನು ಕಚ್ಚಿ ಕಚ್ಚಿಯೇ ಕೊಂದ ಭೂಪ: ಅಷ್ಟಕ್ಕೂ ಅಲ್ಲಿ ನಡೆದ್ದದ್ದೇನು ಗೊತ್ತಾ?
ಕೋಟ್ಯಂತರ ರೂ. ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿಗೆ ಲಕ್ನೋ ಪೊಲೀಸರಿಂದ ನೋಟಿಸ್
ಪೇರಳೆ ಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ಏನಾಗುತ್ತೆ ಗೊತ್ತಾ?
ಗಾಂಜಾ, ಕುಡಿದು ಗಾಡಿ ಚಲಾಯಿಸಿ ಪ್ರಾಣ ಬಲಿ ಪಡೆಯುವುದು ಸಿ.ಟಿ ರವಿ, ಬಿಜೆಪಿ ಸಂಸ್ಕೃತಿ | ರಾಮಲಿಂಗಾರೆಡ್ಡಿ ತಿರುಗೇಟು
ಇಳೆಯದಳಪತಿ ನಟ ವಿಜಯ್-ಎಂ.ಎಸ್.ಧೋನಿ ಭೇಟಿ | ಕಾರಣ ಏನು ಗೊತ್ತಾ?